
ಗದಗ: ರಾತ್ರಿ ಮನೆಯಲ್ಲಿ ಮಲಗಿದ್ದ ತಂದೆ ಮತ್ತು ಮಗಳ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿರೋ ಘಟನೆ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ತಂದೆ ನಿಂಗಪ್ಪ, ಮಗಳು ನೀಲಮ್ಮ ಹಲ್ಲೆಗೊಳಗಾದವರು.
ಗಂಭೀರವಾಗಿ ಹಲ್ಲೆಗೊಳಗಾದ ವೃದ್ಧ ನಿಂಗಪ್ಪನ ಸ್ಥಿತಿ ಚಿಂತಾಜನಕವಾಗಿದ್ದು, ಇಬ್ಬರು ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮುಳಗುಂದ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.