
ಕೊಪ್ಪಳ ಮಾರ್ಚ್ 06: ಡೇ-ನಲ್ಮ್ ಯೋಜನೆಯಡಿ ಅಂದಾಜು 40 ಲಕ್ಷ ರೂ.ಗಳಲ್ಲಿ ನಿರ್ಮಾಣವಾಗಿರುವ 20 ಹಾಸಿಗೆವುಳ್ಳ ನಗರ ವಸತಿ ರಹಿತ ಆಶ್ರಯ ಕೇಂದ್ರ ಕಟ್ಟಡವನ್ನು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ ಸಿಂಗ್ ಅವರು ಮಾರ್ಚ 06ರಂದು ಲೋಕಾರ್ಪಣೆ ಮಾಡಿದರು.
ಸುಕ್ಷೇತ್ರ ಹುಲಿಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾಡಳಿತ ಮತ್ತು ನಗರಸಭೆ ಕೊಪ್ಪಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದಡಿ ನಗರದ ವಸತಿ ರಹಿತರಿಗೆ ಆಶ್ರಯ ಉಪಘಟಕದಡಿಯಲ್ಲಿ ಹೊಸ ಆಶ್ರಯ ಕಟ್ಟಡ ನಿರ್ಮಿಸಲಾಗಿದೆ.

ನಗರದ ಸಾರ್ವಜನಿಕ ಸ್ಥಳಗಳಲ್ಲಿ ಇರುವಂತಹ ರಾತ್ರಿ ನಿರಾಶ್ರಿತರಿಗೆ ವಸತಿ ರಹಿತ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ಆಶ್ರಯ ನೀಡುವುದು ಇದರ ಉದ್ದೇಶವಾಗಿರುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಬಸಪ್ಪ ಆಚಾರ, ಸಂಸದರಾದ ಕರಡಿ ಸಂಗಣ್ಣ, ಕೊಪ್ಪಳ ಶಾಸಕರಾದ ಕೆ.ರಾಘವೆಂದ್ರ ಹಿಟ್ನಾಳ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಬೊಮ್ಮಕ್ಕನವರ್, ಮಾಜಿ ಜಿಪಂ ಅಧ್ಯಕ್ಷರಾದ ಟಿ.ಜನಾರ್ಧನ ಹುಲಿಗಿ, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರರಾದ ಅಮರೇಶ ಬಿರಾದಾರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ, ನಗರಸಭೆ ಪೌರಾಯುಕ್ತರಾದ ಭಜಕ್ಕನವರ್ ಮತ್ತು ಹಲವು ಗಣ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.