
ಕೋಪ್ಪಳ: ವಿಧಾನಸಭೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ನಾಯಕರ ಪ್ರಚಾರದ ಭರಾಟೆ ಜೋರಾಗಿದೆ. ಕೇಂದ್ರ ನಾಯಕರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ.
ಇತ್ತೀಚೆಗೆ ಪ್ರಧಾನಿ ಮೋದಿ, ಅಮಿತ್ ಶಾ ಕರ್ನಾಟಕ ಬಂದು ಹೋಗಿದ್ದರು.
ಇದೀಗ ಆಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಕೊಪ್ಪಳದ ಗಂಗಾವತಿಯಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆ ರೋಡ್ ಶೋನಲ್ಲಿ ಭಾಗಿಯಾಗಲು ರಾಜ್ಯಕ್ಕೆ ಆಗಮಿಸಿದ್ದಾರೆ. ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಗವಿಸಿದ್ದೇಶ್ವರ ಶ್ರೀಗಳ ಆಶಿರ್ವಾದ ಪಡೆದಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆರ್ಶಿವಾದ ಪಡೆದಿದ್ದೆನೆ. ನಾನು ಮಠದ ಅವರಣದಲ್ಲಿ ನಿಂತು ರಾಜಕೀಯ ಮಾತನಾಡೋದಿಲ್ಲ. ಸ್ವಾಮೀಜಿಗಳ ಬಗ್ಗೆ ಬಹಳ ಗೌರವವಿದೆ. ಇವತ್ತು ಪೂರ್ತಿ ಇಲ್ಲೆ ಇರುತ್ತೆನೆ. ಮುಂದೆ ರಾಜಕೀಯದ ಬಗ್ಗೆ ಮಾತನಾಡುತ್ತೇನೆ ಎಂದರು.
ಇನ್ನು ಬಿಜೆಪಿ ರಾಜ್ಯದ ನಾಲ್ಕು ದಿಕ್ಕಿನಿಂದ ವಿಜಯಸಂಕಲ್ಪ ರಥಯಾತ್ರೆ ಆರಂಭಿಸಿದೆ. ಕಲ್ಯಾಣ ಕರ್ನಾಟಕದ ಬಸವಕಲ್ಯಾಣದಿಂದ ಆರಂಭವಾದ ವಿಜಯ ಸಂಕಲ್ಪ ಯಾತ್ರೆ ಇದೀಗ ಕೊಪ್ಪಳ ಜಿಲ್ಲೆಗೆ ಬಂದು ತಲುಪಿದೆ. ಈ ರೋಡ್ ಶೋನಲ್ಲಿ ಹೇಮಂತ್ ಬಿಸ್ವಾ, ಮಾಜಿ ಸಿಎಂ ಜಗದೀಶ ಶೆಟ್ಟರ್, ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಚಿವ ಭಗವಂತ ಖೂಬಾ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದಾರೆ.