ಕೋಲಾರ:
ಸದಾ ಟಮ್ಯೋಟೋ ಬೆಳೆಯನ್ನು ಬೆಳೆದು ಕೊನೆಗೆ ಬೆಲೆ ಸಿಗದೆ ಸಂಕಷ್ಟಕ್ಕೆ ಸಿಲುಕುವ ಬದಲು ನೂತನ ವಿಧಾನವನ್ನು ಅಳವಡಿಸಿಕೊಂಡು ಪ್ರಗತಿ ಹೊಂದ ಬಹುದಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಎಸ್ ಪಿ ದೇವರಾಜ್ ಅಭಿಪ್ರಾಯಪಟ್ಟರು.
ಇಂದು ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಪ್ರಾದೇಶಿಕ ಕೃಷಿಕ ಸಮಾಜ, ಕೃಷಿ, ತೋಟಗಾರಿಕೆ ಮತ್ತು ಪೊಲೀಸ್ ಇಲಾಖೆ, ಜಿಲ್ಲಾ ಕೃಷಿ ಸಮಾಜ ಮತ್ತು ತೋಟಗಾರಿಕೆ ಮಹಾವಿದ್ಯಾಲಯ, ಟಮಕ ಇವರ ಸಂಯುಕ್ತಾಶ್ರಯದಲ್ಲಿ “ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿಚಾರ ಸಂಕೀರ್ಣ ಮತ್ತು ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಹೆಚ್ಚಾಗಿ ಟೊಮ್ಯಾಟೋ ಮತ್ತು ಮಾವು ಮಾತ್ರವಲ್ಲ. ಇತರೆ ಬೆಳೆಗಳನ್ನು ಬೆಳೆಯುವ ಮೂಲಕ ಅರ್ಥಿಕವಾಗಿ ಸಧೃಡರಾಗಲು ಅವರು ಬೆಳೆದಿರುವಂತ ಡ್ರಾಗನ್ ಫ್ರೂಟ್, ಬಟರ್ ಫ್ರೂಟ್, ಸ್ಟಾçಬೆರಿ, ಜುಕನಿ, ಹಣ್ಣುಗಳನ್ನು ಹೆಚ್ಚು ನೀರಿನ ಅವಶ್ಯಕತೆ ಇಲ್ಲದೆ ಕಡಿಮೆ ನೀರಿನಲ್ಲಿ, ಸಾವಯವ ಗೊಬ್ಬರವನ್ನು ಬಳಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭಗಳಿಸುವುದನ್ನು ತೋರಿಸಿದ್ದಾರೆ. ಎಲ್ಲಾ ರೈತರು ಇವರ ಮಾರ್ಗದರ್ಶನವನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂಬ ದೆಸೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.