
ಕೋಪ್ಪಳ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.
ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದು ಈ ವೇಳೆ ಸ್ಕೂಟಿಯಲ್ಲಿ ದಾಖಲೆ ಇಲ್ಲದೆ ತರುತ್ತಿದ್ದ ಸುಮಾರು 3 ಲಕ್ಷ 15 ಸಾವಿರ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಜೊತೆಗೆ ಬ್ಯಾಗ್ ನಲ್ಲಿದ್ದ ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಕೂಟಿಯಲ್ಲಿ ಕೊಪ್ಪಳದಿಂದ ಹೊಸಪೇಟೆಗೆ ತೆರಳುತ್ತಿದ್ದ ಗೌತಮ್ ಜೈನ್ ಹಾಗೂ ಜಿತೇಂದ್ರ ಜೈನ್ ಎನ್ನುವವರನ್ನು ಸಿಪಿಐ ಸಂತೋಷ ಹಳ್ಳೂರ್ ನೇತೃತ್ವದಲ್ಲಿ ತಪಾಸಣೆ ನಡೆಸಿ ಹಣ ಹಾಗೂ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.