
ಚಾಮರಾಜನಗರ : ಜಿಲ್ಲೆಯ ಯಳಂದೂರು ಪಟ್ಟಣದ ಬಳೆಪೇಟೆಯ ಐಸ್ ಫ್ಯಾಕ್ಟರಿ ರಸ್ತೆಯಲ್ಲಿರುವ ಗೋಡನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ಶನಿವಾರ ವಶಪಡಿಸಿಕೊಳ್ಳಲಾಗಿದೆ. ಯಳಂದೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಚಂದ್ರಹಾಸ ನಾಯಕ್ ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 282 ಪಡಿತರ ಅಕ್ಕಿ ಮೂಟೆಗಳನ್ನು ವಶಪಡಿಸಿಕೊಂಡಿದ್ದು, 12 ಟನ್‌ಗೂ ಹೆಚ್ಚು ಅಕ್ಕಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ದಾಳಿಯಲ್ಲಿ , ಒಮಿನಿ, ಗೂಡ್ಸ್‌ವಾಹನ ಹಾಗೂ ಇಚರ್ ವಾಹನ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆರೋಪಿಗಳು ಪರಾರಿಯಾಗಿದ್ದು ಸೈಯದ್ ಅಹಮದ್ ಹಾಗೂ ವಾಹನ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಯಳಂದೂರು ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಚಂದ್ರಹಾಸ ನಾಯಕ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಆಹಾರ ನಿರೀಕ್ಷಕರಾದ ಬಿಸಲಯ್ಯ, ಪಿಎಸ್‌ಐ ಚಂದ್ರಹಾಸ ನಾಯಕ್,112 ಸಿಬ್ಬಂದಿಗಳಾದ ಶ್ರೀನಿವಾಸ್, ಮಹಾದೇವಸ್ವಾಮಿ, ಪೊಲೀಸ್ ಸಿಬ್ಬಂದಿಗಳಾದ ಶಂಕರ್ ಮೂರ್ತಿ,ನಾಗೇಂದ್ರ,ರಂಗಸ್ವಾಮಿ, ಮಹೇಶ್,ಚಾಲಕ ಸೋಮಶೇಖರ್, ಹಾಜರಿದ್ದರು.