ವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ಪ್ರಕಟಿಸಿದೆ.

ಇಂದು ದೆಹಲಿಯಲ್ಲಿ ನಡೆದ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ.

ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರ ಬೀಳಲಿದೆ

ಮೇ 23ರ ಒಳಗಡೆ ಹೊಸ ಸರ್ಕಾರ ರಚನೆ ಆಗಬೇಕೆಂದು ರಾಜೀವ್ ಕುಮಾರ್ ತಿಳಿಸಿದರು. ಇದೇ ಮೊದಲ ಬಾರಿಗೆ ಅಂಗವಿಕಲರು ಮತ್ತು 80 ವರ್ಷ ಮೇಲ್ಪಟ್ಟವರು ಮನೆಯಿಂದಲೇ ಮತದಾನ ಮಾಡುವ ಅವಕಾಶ ಹೊಂದಿದ್ದಾರೆ. ರಾಜ್ಯದಲ್ಲಿ ಒಟ್ಟು 51 ಕೋಟಿ 21 ಲಕ್ಷ ಮತದಾರರಿದ್ದಾರೆ. ಒಟ್ಟು 58282 ಮತಗಟ್ಟೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಕರ್ನಾಟಕದಲ್ಲಿ 12.15 ಲಕ್ಷ ಯುವ ಮತದಾರರಿದ್ದಾರೆ. ಈ ಬಾರಿ ಕರ್ನಾಟಕದಲ್ಲಿ ಮಹಿಳಾ ಮತದಾರರು 2 ಕೋಟಿ 51 ಲಕ್ಷ ಇದ್ದಾರೆ.

ಚುನಾವಣಾ ದಿನಾಂಕ ಘೋಷಣೆ ಆದ ಹಿನ್ನೆಲೆಯಲ್ಲಿ ಇಂದಿನಿಂದ ನೀತಿ ಸಂಹಿತೆ ರಾಜ್ಯದಲ್ಲಿ ಜಾರಿಯಾಗಿದ್ದು ಯಾವುದೇ ಹೊಸ ಯೋಜನೆಗಳು ಕಾಮಗಾರಿಗಳನ್ನು ಘೋಷಣೆ ಮಾಡುವಂತಿಲ್ಲ. ಇನ್ನು ರಾಜಕೀಯ ಚದುರಂಗದಾಟ ಮತ್ತೊಂದು ಹಂತ ತಲುಪಲಿದ್ದು ಕದನ ಕಣ ರಂಗೇರಲಿದೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದೆ. ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. ಏತನ್ಮಧ್ಯೆ, ಕಾಂಗ್ರೆಸ್ ಮತ್ತು ಜೆಡಿಎಸ್ (ಎಸ್) ಕ್ರಮವಾಗಿ 124 ಮತ್ತು 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿವೆ.

error: Content is protected !!