
ದಾವಣಗೆರೆ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.
ಈ ಹಿನ್ನೆಲೆ ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ.
ಬೆಂಗಳೂರು ಗ್ರಾ. ಜಿಲ್ಲೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿಯ ಚೆಕ್ಪೋಸ್ಟ್ನಲ್ಲಿ ಬೆಂಗಳೂರಿಗೆ ಆಗಮಿಸುವ ಎಲ್ಲಾ ವಾಹನ ತಪಾಸಣೆ ಮಾಡುತ್ತಿದ್ದಾರೆ.ಅದೇ ರೀತಿ ಗದಗ ಜಿಲ್ಲೆಯ ವಿವಿಧೆಡೆ ಹಾಕಿದ್ದ, ಶಾಸಕರು ಹಾಗೂ ನಾಯಕರ ಕಟೌಟ್ ಬ್ಯಾನರ್ ತೆರವು ಮಾಡಿದ್ದಾರೆ. ಸರಕಾರದ ಕಾರ್ಯಕ್ರಮಗಳ ಬ್ಯಾನರ್ ಗಳು, ಸಚಿವರ, ಶಾಸಕರ ಕಟೌಟ್ ತೆರವು ಮಾಡಿದ್ದಾರೆ. ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಫುಲ್ ಅಲರ್ಟ್ ಆಗಿದ್ದು, ಎಲ್ಲ ಕಡೆ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ.
ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿ : ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್
ನವದೆಹಲಿ : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ. 24 ರಂದ 15 ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಹೀಗಾಗಿ ಮೇ.23 ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಕರ್ನಾಟಕದಲ್ಲಿ ಒಟ್ಟು 5,21,73,579 ಮತದಾರರು ಇದ್ದಾರೆ, ಕರ್ನಾಟಕದಲ್ಲಿ ಪುರುಷ ಮತದಾರರು 2,62,42,561, ಮಹಿಳಾ ಮತದಾರರು 2,59,26,319, ತೃತೀಯ ಲಿಂಗಿ ಮತದಾರರು 4,699 ಇದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು, ಒದೊಂದು ಮತಗಟ್ಟೆಗೆ 883 ಮತದಾರರು. ನಗರ ಪ್ರದೇಶಧಲ್ಲಿ 24,063 ಮತಗಟ್ಟೆಗಳ ಸ್ಥಾಪನೆ, ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳ ಸ್ಥಾಪನೆ 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.80 ವರ್ಷ ಮೇಲ್ಪಟ್ಟವರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿದೆ. ಈ ಮೂಲಕ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡಲಾಗಿದೆ ಎಂದರು.