
ಮೈಸೂರು: ದೇಶದಲ್ಲಿ ಯಾವುದೇ ಚುನಾವಣೆ ಘೋಷಣೆಯಾದಾಗ ಅದರೊಂದಿಗೆ ಚುನಾವಣಾ ನೀತಿ ಸಂಹಿತೆಯೂ ಘೋಷಣೆಯಾಗುತ್ತದೆ. ಯಾವುದೇ ಪಕ್ಷದ ಅಭ್ಯರ್ಥಿಯು ಮತದಾರರಿಗೆ ಯಾವುದೇ ಆಮಿಷಗಳನ್ನು ಒಡ್ಡುವಂತಿಲ್ಲ. ಆದರೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.
ಚುನಾವಣೆ ಘೋಷಣೆಯಾಗುತ್ತಿದಂತೆ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರ ಪ್ರವಾಸ ಕೈಗೊಂಡಿದ್ದಾರೆ. ವರುಣ ಕ್ಷೇತ್ರದ ಬಿಳುಗುಳಿ ಗ್ರಾಮದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಿದ್ದಾರೆ. ಬಳಿಕ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನೆ ಸಮಾರಂಭವು ನೇರವೇರಿದೆ.
ಈ ಬೃಹತ್ ಸಮಾವೇಶದಲ್ಲಿ ಅತ್ಯಂತ ಉತ್ಸಾಹದಿಂದ ಬೃಹತ್ ಸಮಾವೇಶದಲ್ಲಿ ಭಾಗಿಯಾದ್ದರು ಸಿದ್ದರಾಮಯ್ಯ. ರೋಡ್ ಶೋ ವೇಳೆ ತಮಟೆ ಬಡಿಯುವವರಿಗೆ ಒಂದು ಸಾವಿರ ರೂಪಾಯಿ ಹಣ ಕೊಟ್ಟಿದ್ದಾರೆ. ಈ ಮೂಲಕವಾಗಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಮೈಸೂರಿನ ವರುಣ ಕ್ಷೇತ್ರದ ಬಿಳುಗುಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ, ಶಾಸಕ ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಸುನೀಲ್ ಬೋಸ್ ಸೇರಿದಂತೆ ಹಲವು ಕೈ ನಾಯಕರು ಸಮಾವೇಶದಲ್ಲಿ ಭಾಗಿಯಾಗಿದ್ದರು.