ಕೋಲಾರ: ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಏಪ್ರಿಲ್ 9ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸತ್ಯಮೇವ ಜಯತೆ ಎಂಬುದಾಗಿ ಹೆಸರಿಸಲಾಗಿತ್ತು. ಈಗ ಈ ಹೆಸರನ್ನು ಜಯ ಭಾರತ್ ಘೋಷಣೆಯಡಿ ಮಾಡಲು ನಿರ್ಧರಿಸಿದೆ.

ಈ ಕುರಿತಂತೆ ಇಂದು ಮಾಹಿತಿಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. ಏಪ್ರಿಲ್ 9ರಂದು ದೇಶಾದ್ಯಂತ ನಡೆಸಲು ಉದ್ದೇಶಿಸಿದ್ದಂತ ಸತ್ಯಮೇವ ಜಯತೆ ಪ್ರತಿಭಟನೆಯ ಹೆಸರು ಬದಲಾಯಿಸಲಾಗಿದೆ. ಜಯ ಭಾರತ್ ಹೆಸರಿನಲ್ಲಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದರು.

ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಏಪ್ರಿಲ್ 9ರಂದು ಜಯ ಭಾರತ್ ಹೆಸರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಕೋಲಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ತಿಳಿಸಿದ್ದಾರೆ.

ಏ. 9ರಂದು ಕೋಲಾರಕ್ಕೆ ರಾಹುಲ್ ಗಾಂಧಿ ಆಗಮನ : ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ

ಕೋಲಾರ : ಮುಂದಿನ ವಿಧಾನ ಸಭೆ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಏ. 9ರಂದು ಕೊಲಾರಕ್ಕೆ ಆಗಮಿಸಲಿದ್ದಾರೆ ಈ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.

ಈ ಹಿಂದೆಯೇ ಏಪ್ರಿಲ್ 5 ರಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ನಗರಕ್ಕೆ ಬರಬೇಕಿತ್ತು ಆದರೆ ಕಾರಣಾಂತರಗಳಿಂದ ಏ. 9ರಂದು ಬರುವುದಾಗಿ ಮುಂದೂಡಲಾಗಿತ್ತು. ಏಪ್ರಿಲ್ 9 ರಂದು ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಳಿಕ ಸಮಾವೇಶ ಉದ್ದೇಶಿಸಿ ರಾಹುಲ್‌ ಗಾಂಧಿ ಮಾತನಾಡಲಿದ್ದಾರೆ. ಒಂದು ವಾರದ ಮೊದಲೆ ರಾಜ್ಯದಲ್ಲಿ ಭರ್ಜರಿ ಸಿದ್ದತೆ ನಡೆಸಲಾಗುತ್ತಿದ್ದು,ಸಿದ್ಧತೆಗಳನ್ನು ವೀಕ್ಷಿಸಲು ಇಂದು ರಂದೀಪ್ ಸುರ್ಜೆವಾಲಾ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕೋಲಾರಗೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

error: Content is protected !!