ಗಂಗಾವತಿ: ಎ-7 ಚುನಾವಣೆ ಸಮೀಪಿಸುತ್ತಿದಂತೆ ವಿವಿಧ ರಾಜಕೀಯ ಪಕ್ಷಗಳಿಂದ ಯಾವುದಾದರೂ ನೆಪದಲ್ಲಿ ಅಮಿಷಗಳ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಈ ಬಾರಿಯ ಚುನಾವಣೆಯಲ್ಲಿ ಬಾಡೂಟಗಳು ಭರ್ಜರಿಯಾಗಿ ಆಯೋಜಿಸಲಾಗುತ್ತಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ ಚುನಾವಣಾ ಆಯೋಗ ಬ್ರೇಕ್ ಹಾಕಲು ಮುಂದಾಗಿದೆ.
ಗಂಗಾವತಿ ತಾಲೂಕಿನ ಆನೆಗೊಂದಿ ಹೊಳೆಯ ದಂಡೆಯಲ್ಲಿ ಸುಮಾರು 50ಕ್ಕೂ ಹೆಚ್ಚು ಜನರಿಗೆ ಬಾಡೂಟದ ವ್ಯವಸ್ಥೆ ಮಾಡಿದ್ದು ಆಯೋಗದ ಕೆಂಗಣ್ಣಿಗೆ ಗುರಿಯಾದ್ದಾರೆ. ರೆಡ್ಡಿ ಆಪ್ತ ಕೆಆರ್‌ಪಿ ಪಕ್ಷದ ಮುಖಂಡ ಮಹೇಶ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಂಡಿದ್ದಾರೆ.