ಗಂಗಾವತಿ (ಕೊಪ್ಪಳ ಜಿಲ್ಲೆ): ಕಾಂಗ್ರೆಸ್‌ ಟಿಕೆಟ್‌ನಿಂದ ವಂಚಿತರಾಗಿರುವ ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌. ಶ್ರೀನಾಥ್‌ ಅವರನ್ನು ಶನಿವಾರ ರಾತ್ರಿ ಇಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಪ್ರತ್ಯೇಕವಾಗಿ ಭೇಟಿಯಾದರು.

ಬಿಜೆಪಿ ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು ಅವರು ಮಧ್ಯಾಹ್ನ ಶ್ರೀನಾಥ ಅವರನ್ನು ಭೇಟಿಯಾದ ಬೆನ್ನಲ್ಲೇ ರೆಡ್ಡಿ ಈಗ ಭೇಟಿ ನೀಡಿದ್ದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ರೆಡ್ಡಿ ಮೊದಲು ಎಚ್‌.ಜಿ. ರಾಮುಲು ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಬಳಿಕ ಶ್ರೀನಾಥ್‌ ಜೊತೆ ಕೆಲಹೊತ್ತು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಶ್ರೀನಾಥ್‌ ಟಿಕೆಟ್ ಆಕಾಂಕ್ಷಿಯಾಗಿದ್ದಾಗ ಬೇರೆ ಪಕ್ಷಗಳ ಯಾವ ನಾಯಕರೂ ಅವರ ಮನೆ ಬಳಿ ಸುಳಿದಿರಲಿಲ್ಲ. ಈಗ ಒಬ್ಬರಾದ ಮೇಲೊಬ್ಬರು ಶ್ರೀನಾಥ್‌ ಮನೆಗೆ ಭೇಟಿ ನೀಡುತ್ತಿದ್ದಾರೆ. ಈ ಕುರಿತು ಕಾಲಚಕ್ರ ಗೆ ಪ್ರತಿಕ್ರಿಯಿಸಿದ ಅವರು ‘ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿವೆ’ ಎಂದರು.

error: Content is protected !!