
ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಕಮತನೂರ ಗೇಟ್ ಸಮೀಪ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ 2.31 ಲಕ್ಷ ರೂ ಬೆಲೆ ಬಾಳುವ 210 ಅಕ್ಕಿ ಚೀಲವನ್ನು ವಶಪಡೆಸಿಕೊಂಡಿರುವ ಘಟನೆ ನಡೆದಿದೆ.
ಹುಕ್ಕೇರಿ ಕಡೆಯಿಂದ ಮಹಾರಾಷ್ಟ್ರದ ಕೊಲ್ಲಾಪುರದತ್ತ ಅನ್ನಭಾಗ್ಯ ಯೋಜನೆಯಡಿ ಸರಕಾರ ನೀಡುವ ಪಡಿತರ ಅಕ್ಕಿ ಸಾಗಿಸುತ್ತಿದ್ದ ಲಾರಿ ಮೇಲೆ ಖಚಿತ ಮಾಹಿತಿ ಮೇಲೆ ಸಂಕೇಶ್ವರ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಳಗಾವಿ ಮೂಲದ ಉತ್ತಮ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ ಪೊಲೀಸರು ಲಾರಿ ಸಮೇತ 10 ಟನ್ ಅಕ್ಕಿಯನ್ನ ವಶಪಡಿಸಿಕೊಂಡಿದ್ದಾರೆ. ಆಹಾರ ಇಲಾಖೆ ಅಧಿಕಾರಿ ಲೋಕೇಶ್ ಢಂಗೆ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.