ನಂಜನಗೂಡು :ಸ್ಪೋರ್ಟ್ಸ್ ಫೌಂಡೇಶನ್ ವತಿಯಿಂದ ಡಿಸೆಂಬರ್ 10ರಂದು ಸಂಜೆ 5:00 ಗಂಟೆಗೆ ವಜ್ರದೇಹಿ 2022 ರ ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಫೌಂಡೇಶನ್ ನ ಕಾರ್ಯದರ್ಶಿ ಉಮಾ ಮಹೇಶ್ ತಿಳಿಸಿದ್ದಾರೆ.
ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿ ನಡೆಸಿ ಅವರು ಮಾತನಾಡಿ
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ವಿ ಶ್ರೀನಿವಾಸ್ ಪ್ರಸಾದ್ ನೆರವೇರಿಸಲಿದ್ದು ಅಧ್ಯಕ್ಷತೆಯನ್ನು ನಮ್ಮ ಪೌಂಡೇಶನ್ ಅಧ್ಯಕ್ಷರಾದ ಯು. ಎನ್. ಪದ್ಮನಾಭರಾವ್ ವಹಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ಶಾಸಕ ಹರ್ಷವರ್ಧನ್ ನಗರಸಭೆ ಅಧ್ಯಕ್ಷ ಮಹಾದೇವಸ್ವಾಮಿ ಮತ್ತು ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪಗೌಡ ಭಾಗವಹಿಸಲಿದ್ದಾರೆ ಎಂದರು.
ಸುಮಾರು 200 ಮಂದಿ ಸ್ಪರ್ಧೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದ್ದು ವಿವಿಧ ವಿಭಾಗಗಳಿಂದ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಸುಮಾರು 2 ಲಕ್ಷ ರೂಪಾಯಿವರೆಗೆ ಬಹುಮಾನ ನೀಡಲಾಗುತ್ತಿದೆ ಎಂದರು.
ಬಹುಮಾನ ವಿತರಣೆಗೆ ಮಾಜಿ ಸಚಿವರುಗಳಾದ ಸತೀಶ್ ಜಾರಕಿಹೊಳಿ, ಡಾ ಎಚ್ ಸಿ ಮಹದೇವಪ್ಪ, ಮಾಜಿ ಸಂಸದ ಧ್ರುವನಾರಾಯಣ್ ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಂಜನಗೂಡು ಸ್ಪೋರ್ಟ್ಸ್ ಫೌಂಡೇಶನ್ ನ ಸದಸ್ಯರುಗಳಾದ ಅನಿಲ್ ಕುಮಾರ್ ಹಾಗೂ ಶಬರೀಶ್ ಉಪಸ್ಥಿತರಿದ್ದರು.