ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಎರಡು ಪಟ್ಟಿ ಬಿಡುಗಡೆ ಮಾಡಿದ್ದು, ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಆದರೆ ಆಡಳಿತರೂಢ ಬಿಜೆಪಿ ಈವರೆಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡದಿರುವ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಮೂಡಿತ್ತು.

ಇದೀಗ ಬಿಜೆಪಿ ಹೈಕಮಾಂಡ್ 189 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಈ ಬಗ್ಗೆ 52 ಹೊಸ ಮುಖಗಳಿಗೆ ಅವಕಾಶ ನೀಡಿದೆ.

ಅಲ್ಲದೆ 32 ಓಬಿಸಿ ಅಭ್ಯರ್ಥಿಗಳು ಹಾಗೂ 16 ಎಸ್ ಟಿ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕರ್ನಾಟಕ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳ ಪೈಕಿ 9 ಮಂದಿ ವೈದ್ಯರು, ಹಾಗೂ ಓರ್ವ ನಿವೃತ್ತ ಐಎಎಸ್ ಅಧಿಕಾರಿಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. 8 ಮಂದಿ ಸಾಮಾಜಿಕ ಕಾರ್ಯಕರ್ತರನ್ನೂ ಚುನಾವಣೆ ಕಣಕ್ಕೆ ಇಳಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಮೊದಲಿನಂತೆ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ ಅಭ್ಯರ್ಥಿಯಾಗಿದ್ದಾರೆ. ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ, ರಾಯಭಾಗದಲ್ಲಿ ದುರ್ಯೋಧನ ಐಹೊಳೆ  ಕನಕಗಿರಿ ಬಸವರಾಜ ದಡೆಸೂಗೂರ ಅವಕಾಶ ಪಡೆದುಕೊಂಡಿದ್ದಾರೆ.

error: Content is protected !!