
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮುನಿಸಿಕೊಂಡಿರುವ ಮಾಜಿ ಸಿಎಂ ಜಗದೀಶ್ ಇಂದು ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಈ ಬೆನ್ನಲ್ಲೆ ಬೆಂಗಳೂರಲ್ಲಿ ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಎಲ್ಲಾ ಹಿರಿಯ ನಾಯಕರು ಶೆಟ್ಟರ್ ಮನವೋಲಿಸಲು ಪ್ರಯತ್ನಿದ್ದಾರೆ.
ಶೆಟ್ಟರ್ ಬಿಜೆಪಿ ತೊರೆಯೋದ್ರಿಂದ ಹಿನ್ನೆಲೆ ಆಗಲ್ಲ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಎಲ್ಲಾ ರೀತಿಯ ಗೌರವವನ್ನು ಕೊಡಲಾಗಿತ್ತು. ಅಷ್ಟೇ ಅಲ್ಲದೇ ಲಿಂಗಾಯತರನ್ನ ಗುರುತಿಸಿ ಸಿಎಂ ಮಾಡಿದ್ದು ಬಿಜೆಪಿ. ಎಲ್ಲಾ ಸಮುದಾಯ ಗುರುತಿಸಿ ಟಿಕೆಟ್ ಕೊಡಲಾಗಿದೆ. ಸಾಮಾಜಿಕ ನ್ಯಾಯದಡಿ ಸ್ಥಾನಮಾನ ನೀಡಲಾಗಿದೆ. ಬಿಜೆಪಿ ತೊರೆದ ಶೆಟ್ಟರ್ ಕಟೀಲ್ ಖಡಕ್ ವಾರ್ನಿಂಗ್ ನೀಡಿದ್ದಾರೆ
: ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ವಿಚಾರವಾಗಿ ಮುನಿಸಿಕೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಮನವೊಲಿಕೆ ಯತ್ನ ವಿಫಲವಾಗಿದ್ದು, ಇಂದು ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಶಿರಸಿಗೆ ತೆರಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಬಳಿಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ.
ಶನಿವಾರ ಸಂಜೆ ಹುಬ್ಬಳ್ಳಿಯ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗಮಿಸಿ ಮನವೊಲಿಸುವ ಪ್ರಯತ್ನ ನಡೆಸಿದ್ದಾರೆ ಆದರೆ ವರಿಷ್ಠರಿಂದ ಟಿಕೆಟ್ ಸಿಗುವ ಭರವಸೆ ಸಿಗದ ಕಾರಣ ಆಕ್ರೋಶಗೊಂಡ ಶೆಟ್ಟರ್ ರಾಜೀನಾಮೆ ನೀಡಿದ್ದಾರೆ.