ಇತಿಹಾಸ ಸೃಷ್ಟಿಮಾಡಿದ ಜನ ಸಂಕಲ್ಪ ಯಾತ್ರೆ ಸಮಾವೇಶ
ಕೊರಟಗೆರೆಯಲ್ಲಿ ಇತಿಹಾಸ ಸೃಷ್ಟಿಮಾಡಿದ ಜನಸಂಕಲ್ಪ ಸಮಾವೇಶ.
15ಸಾವಿರಕ್ಕೂ ಅಧಿಕ ಕಾರ್ಯಕರ್ತರ ಆಗಮನ.
ಕೇಸರಿಮಯವಾಗಿ ಕಂಗೋಳಿಸಿದ ಕೊರಟಗೆರೆ ಪಟ್ಟಣ.
ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ಸೋಲಿಸ್ತಾರೇ
ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೇಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತೇ: ಬಸವರಾಜು ಬೊಮ್ಮಾಯಿ
ಕೊರಟಗೆರೆ : ಡಾ.ಜಿ.ಪರಮೇಶ್ವರನ್ನ ಕಾಂಗ್ರೇಸ್ ಪಕ್ಷದವರೇ ವೈರಿಗಳಾಗಿ ಸೋಲಿಸ್ತಾರೇ.. ಅದು ಸ್ವತಃ ಶಾಸಕ ಡಾ.ಜಿ.ಪರಮೇಶ್ವರ್ ಅವರಿಗೂ ಕಟುಸತ್ಯ ಗೋತ್ತಾಗಿದೆ.. ಕೊರಟಗೆರೆ ಕ್ಷೇತ್ರದಲ್ಲಿ 2023ಕ್ಕೆ ಬಿಜೆಪಿ ಪಕ್ಷದ ಅಭ್ಯರ್ಥಿಯೇ ಗೇಲ್ತಾರೇ.. ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ 130ಸೀಟು ಬರುವುದು ಗ್ಯಾರಂಟಿ ಎಂದು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ತಿಳಿಸಿದರು.
ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿಂದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯ ಸಾರ್ಥಕ ಸೇವೆ-ಯುವ ಸಬಲೀಕರಣ ವೇದಿಕೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ತುಮಕೂರು ಬಿಜೆಪಿ ಜಿಲ್ಲಾಧ್ಯಕ್ಷ ಹೆಬ್ಬಾಕರವಿ, ಪ್ರಧಾನ ಕಾರ್ಯದರ್ಶಿ ಸ್ವಾಮಿ, ಮಧುಗಿರಿ ಜಿಲ್ಲಾಧ್ಯಕ್ಷ ಟಿ.ಕೆ.ಮಂಜುನಾಥ, ಪ್ರಭಾರಿ ವಿಕಾಸ್‍ಪುತ್ತೂರು, ಕೊರಟಗೆರೆ ಮಂಡಲ ಅಧ್ಯಕ್ಷ ಪವನಕುಮಾರ್, ಯುವಧ್ಯಕ್ಷ ಗುರುಧತ್ ಮುಖಂಡರಾದ ವೆಂಕಟಾಚಲಯ್ಯ, ಹೇಮಾಲತಾ, ಸುಶಿಲಮ್ಮ, ಮಮತಾ, ದಾಡಿವೆಂಕಟೇಶ್, ಹನುಮಂತರಾಯಪ್ಪ, ರಘು, ಲೊಕೇಶ್, ಸಂಜೀವರೆಡ್ಡಿ, ಸೇರಿದಂತೆ ಇತರರು ಇದ್ದರು.