ಕೊಪ್ಪಳ :ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಗೆ ಸಾಮಾನ್ಯ ವೀಕ್ಷಕರು, ಚುನಾವಣಾ ವೆಚ್ಚ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಆಗಮಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ.
ಸಾಮಾನ್ಯ ವೀಕ್ಷಕರಾಗಿ ಯಲಬುರ್ಗಾ ಮತ್ತು ಗಂಗಾವತಿ ವಿಧಾನಸಭಾ ಕ್ಷೇತ್ರಗಳಿಗೆ ವಿ.ಸಂಪತ್ ಐಎಎಸ್ ಮೊ.ಸಂ: 9380251638, ಕುಷ್ಟಗಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಸ್ವಪ್ನಿಲ್ ಎಂ ನಾಯಕ ಐಎಎಸ್ ಮೊ.ಸಂ: 9380294275 ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಭಾನಾ ಪ್ರಕಾಶ ಯಾತರಾ ಐಎಎಸ್ ಮೊ.ಸಂ: 9380286007 ಇವರು ಆಗಮಿಸಿದ್ದಾರೆ.
ಚುನಾವಣಾ ವೆಚ್ಚದ ವೀಕ್ಷಕರಾಗಿ ಕುಷ್ಟಗಿ ಮತ್ತು ಕನಕಗಿರಿ ವಿಧಾನಸಭಾ ಕ್ಷೇತ್ರಗಳಿಗೆ ಜಿ.ವಿವೇಕಾನಂದ ಐಆರ್‌ಎಸ್ ಮೊ.ಸಂ: 9113026380, ಯಲಬುರ್ಗಾ ಮತ್ತು ಕೊಪ್ಪಳ ವಿಧಾನಸಭಾ ಕ್ಷೇತ್ರಗಳಿಗೆ ಎಸ್.ಆರ್.ನೆಡುಮಾರನ್ ಐಆರ್‌ಎಸ್ ಮೊ.ಸಂ: 9113022689 ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಡಾ ಎ.ವೆಂಕಟೇಶ ಬಾಬಾ ಐಆರ್‌ಎಸ್ ಮೊ.ಸಂ: 9113005210 ಆಗಮಿಸಿದ್ದಾರೆ.
ಅದೇ ರೀತಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮನೋಜ್ ತಿವಾರಿ ಐಪಿಎಸ್ ಅವರು ಪೊಲೀಸ್ ವೀಕ್ಷಕರಾಗಿ ಆಗಮಿಸಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ದೂರುಗಳಿದ್ದಲ್ಲಿ ಸಾರ್ವಜನಿಕರು ಇವರಿಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಬಹುದಾಗಿದೆ ಎಂದು ತಿಳಿಸಿದೆ.