
ಚಿತ್ರದುರ್ಗ : ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನಿಗೆ ಕೋರ್ಟ್ 6 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ಚಿತ್ರದುರ್ಗ ಜಿಲ್ಲೆ ಅಪರ ಹಾಗೂ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಮುರುಡಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ನರಸಿಂಹಸ್ವಾಮಿ ಗೆ ಕೋರ್ಟ್ 6 ವರ್ಷ ಕಠಿಣ ಶಿಕ್ಷೆ ಹಾಗೂ 30 ಸಾವಿರ ದಂಡ ವಿಧಿಸಿ ಚಿತ್ರದುರ್ಗ ಜಿಲ್ಲೆ ಅಪರ ಹಾಗೂ ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.2020 ರಲ್ಲಿ ಶಾಲಾ ಬಾಲಕಿ ಮೇಲೆ ಶಾಲಾ ಶಿಕ್ಷಕ ನರಸಿಂಹಸ್ವಾಮಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಇನ್ ಸ್ಪೈರ್ ಅವಾರ್ಡ್ ಕಾರ್ಯಕ್ರಮಕ್ಕೆ ಬಾಲಕಿ ಚಿತ್ರದುರ್ಗಕ್ಕೆ ಬಂದಿದ್ದಾಗ ಶಿಕ್ಷಕ ನರಸಿಂಹಸ್ವಾಮಿ ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು .