ಕೊಪ್ಪಳ ಏಪ್ರಿಲ್ 26 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ನಿರ್ವಹಣೆಯಾಗುತ್ತಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2023-24ನೇ ಸಾಲಿನ 6ನೇ ತರಗತಿಯ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ಶಾಲೆಯಲ್ಲಿ ದಾಖಲಾತಿ 60 ಸೀಟುಗಳು ಮಾತ್ರ ಇದ್ದು, ಪೋಷಕರು, ವಿದ್ಯಾರ್ಥಿಗಳು ನೇರವಾಗಿ ಎಲ್ಲಾ ದಾಖಲೆಗಳೊಂದಿಗೆ ಆಯಾ ಮೌಲಾನಾ ಆಜಾದ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಂಪರ್ಕಿಸಿ ಅರ್ಜಿಯನ್ನು ಪಡೆದು ವಿವರಗಳ ಅರ್ಜಿಯನ್ನು ಮೇ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು 5ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು. ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಶೇ 75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ 25ರಷ್ಟು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಮತ್ತು ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 1 ಲಕ್ಷ ರೂ.ಗಳಿಗೆ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 2.50 ಲಕ್ಷಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು 2.50 ಲಕ್ಷ ರೂ.ಗಳಿಗೆ ಮೀರಿರಬಾರದು. ಅಂಗವಿಕಲ ವಿದ್ಯಾರ್ಥಿಗಳು ಹಾಗೂ ಮಾಜಿ ಸೈನಿಕರಿಕಗೆ ಶೇ. 04ರಷ್ಟು ಮತ್ತು ದುರ್ಬಲ ವರ್ಗ, ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ ಶೇ 05ರಷ್ಟನ್ನು ಕಾಯ್ದಿರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಮತ್ತು ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ತಾಲ್ಲೂಕಿನ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಾದ ಸರ್ದಾರಗಲ್ಲಿ ಶಾಲೆ ಮೊ.ಸಂ: 9900617290, ದಿಡ್ಡಿಕೇರಾ ಓಣಿ ಶಾಲೆ ಮೊ.ಸಂ: 8867166113, ಮುನಿರಾಬಾದ್ ಶಾಲೆ ಮೊ.ಸಂ: 9980229105 ಹಾಗೂ ಇತರ ತಾಲ್ಲೂಕುಗಳಲ್ಲಿರುವ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಗಳಾದ ಗಂಗಾವತಿಯ (ಲಕ್ಷ್ಮೀ ಕ್ಯಾಂಪ್) ಶಾಲೆ ಮೊ.ಸಂ: 9880026927, ಕನಕಗಿರಿಯ ಶಾಲೆ ಮೊ.ಸಂ: 9611024212, ಕಾರಟಗಿಯ ಮೊ.ಸಂ: 8073548574, ಕುಷ್ಟಗಿ ತಾಲ್ಲೂಕಿನ ತಾವರಗೇರಾ ಶಾಲೆ ಮೊ.ಸಂ: 9035817724, ಯಲಬುರ್ಗಾ ಶಾಲೆ ಮೊ.ಸಂ: 6363331628, ಕುಕನೂರು ಶಾಲೆ ಮೊ.ಸಂ: 7829041942 ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.