ಚಿಕ್ಕಬಳ್ಳಾಪುರ:ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ಎ ಜೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಒತ್ತಾಯಿಸಿ ಬ್ರಹತ್ ಸಮಾವೇಶವನ್ನು ಇದೇ ತಿಂಗಳ 11ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಪತ್ರಕರ್ತರ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಜಿಲ್ಲಾದ್ಯಕ್ಷ ರಾಮಕೃಷ್ಣ ತಿಳಿಸಿದರು.
ತದನಂತರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ರಾಮ ಕೃಷ್ಣ ರವರು ನಮ್ಮ ಜನಾಂಗಕ್ಕೆ ಒಳ ಮೀಸಲಾತಿ ಹಾಗೂ ಎ ಜೆ ಸದಾಶಿವ ಆಯೋಗದ ವರದಿ ಬಹಳಷ್ಟು ವರ್ಷಗಳಿಂದ ಜಾರಿ ಆಗದೆ ಸರ್ಕಾರ ಮೀನ ಮೇಷ ಎಣಿಸುತ್ತಿದೆ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಾವು ನಮ್ಮ ಹಕ್ಕು ಕೇಳುತ್ತಿದ್ದೇವೆ ನಮ್ಮ ಏನೆಲ್ಲಾ ಬೇಡಿಕೆಗಳಿದೆ ಅದನ್ನು ಸರ್ಕಾರ ಈ ಕೂಡಲೇ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು, ಪ್ರಮುಖವಾಗಿ ನಮ್ಮ ಬೇಡಿಕೆಗಳು ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಜಾರಿಯಾಗಬೇಕು,
ಜನಾಂಗದ ಮಕ್ಕಳಿಗೆ ವಿಧ್ಯಾರ್ಥಿ ವೇತನವನ್ನು ಈ ಕೂಡಲೇ ಮುಂದುವರಿಸಬೇಕು.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಬ್ರಹತ್ ಸಮಾವೇಶದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಿಂದ 2 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು…