ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಇಂದು ಬಿಜೆಪಿ ಪ್ರಜಾ ಪ್ರಣಾಳಿಕೆ ಹೆಸರಿನಲ್ಲಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೆ ಕಾಂಗ್ರೆಸ್ ಕೂಡ ನಾಳೆ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಅದಕ್ಕೆ ಕಾಂಗ್ರೆಸ್ ಸಿದ್ದತೆ ಕೂಡ ಮಾಡಿಕೊಂಡಿದೆ.

ಈಗಾಗಲೇ ಕಾಂಗ್ರೆಸ್ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವ ನಿಧಿ, 10 ಕೆಜಿ ಉಚಿತ ಅಕ್ಕಿ, ಮಹಿಳೆಯರಿಗೆ ಉಚಿತ ಬಸ್ ಪಾಸ್, ಅಂಗನವಾಡಿ, ಆಶಾ, ಬಿಸಿಯೂಟ ‌ನೌಕರರಿಗೆ ಗೌರವ ಧನ ಹೆಚ್ಚಳ ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದೆ.

ವಿಭಾಗವಾರು ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕರಾವಳಿ ಭಾಗ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ, ಮಹಿಳೆಯರು, ಯುವಕರು, ರೈತರು, ಕೂಲಿ ಕಾರ್ಮಿಕರು, ಆದಿವಾಸಿಗಳು, ದಲಿತರು, ಒಬಿಸಿ, ಅಲ್ಪಸಂಖ್ಯಾತರು, ಅಪಾರ್ಟ್ಮೆಂಟ್ ನಿವಾಸಿಗಳನ್ನು ಗುರಿಯಾಗಿಸಿಕೊಂಡು ಪ್ರಣಾಳಿಕೆ ಸಿದ್ಧಪಡಿಸಲಿದ್ದಾರೆ. ಕಳೆದ ಬಾರಿಗಿಂತ ಹೆಚ್ಚಿನ ಭರವಸೆಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ.

error: Content is protected !!