
ಗಂಗಾವತಿ :ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಚನ್ನಬಸವ ಸ್ವಾಮಿ ತಾಲೂಕ ಕ್ರೀಡಾಂಗಣದಲ್ಲಿ ಸ್ವಾಭಿಮಾನಿ ಸಂಕಲ್ಪ ಬೃಹತ್ ಸಮಾವೇಶವನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಗಾಲಿ ಜನಾರ್ದನ್ ರೆಡ್ಡಿ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದಾರೆ.
ನಾಳೆ ಬೆಳಗ್ಗೆ10.30 ಗಂಗಾವತಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತದಾರರು ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ಭೀಮಶಂಕರ್ ಪಾಟೀಲ್ ಗಂಗಾವತಿ ವಿಧಾನಸಭಾ ಕ್ಷೇತ್ರದ ಎಲ್ಲ ಮತದಾರರಲ್ಲಿ ವಿನಂತಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಯುವ ಘಟಕ ಅಧ್ಯಕ್ಷ ರಾದ ಭೀಮ ಶಂಕರ್ ಪಾಟೀಲ್. ಜಿಲ್ಲಾಧ್ಯಕ್ಷರಾದ ಮನೋಹರ ಗೌಡ ಹೇರೂರು. ತಾಲೂಕು ಅಧ್ಯಕ್ಷರಾದ ವೀರೇಶ್ ಬಲಕುಂದಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಸೈಯದ್ ಜಿಲಾನಿ ಪಾಷಾ ಖಾದ್ರಿ. ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಧ್ಯಕ್ಷರಾದ ರಾಜೇಶ್ ರೆಡ್ಡಿ. ನಗರದ ಪ್ರಚಾರ ಸಮಿತಿ ಮುಖಂಡರಾದ ಅಮರ ಜ್ಯೋತಿ ನರಸಪ್ಪ. ಸೇರಿದಂತೆ ಇನ್ನೂ ಅನೇಕ ಹಿರಿಯ ಕಿರಿಯ ಮುಖಂಡರು ಉಪಸ್ಥಿತರಿದ್ದರು.