
ದೇವದುರ್ಗ: ಸ್ಥಳೀಯ ಪುರಸಭೆ ವ್ಯವಸ್ಥಾಪಕ ಗಂಗಾಧರ ಅವರನ್ನು ಚುನಾವಣೆ ಕರ್ತವ್ಯ ಲೋಪ ಆರೋಪದಡಿ ಚುನಾವಣಾ ಆಯೋಗದ ನಿರ್ದೇಶನದಂತೆ ಅಮಾನತು ಮಾಡಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.
ಕ್ಷೇತ್ರದ ಎಲ್ಲ ಮತಗಟ್ಟೆಗಳಲ್ಲಿ ಧ್ವಜಾರೋಹಣಕ್ಕಾಗಿ ರಾಷ್ಟ್ರಧ್ವಜ ಸಿದ್ಧಪಡಿಸಿ ಮತಗಟ್ಟೆ ಅಧಿಕಾರಿಗಳಿಗೆ ವಿತರಿಸಲು ಸೂಚಿಸಲಾಗಿತ್ತು.
ಆದರೆ, ಪುರಸಭೆ ಮುಖ್ಯಾಧಿಕಾರಿ ಈ ಕುರಿತು ಕರ್ತವ್ಯ ಲೋಪ ಎಸಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 195ರಡಿ ಅಮಾನತು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಎಂ.ಎನ್.ಚೇತನ್ ಕುಮಾರ ತಿಳಿಸಿದ್ದಾರೆ.