
ಕೊಪ್ಪಳ ಮೇ 07 : ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ತಾಲೂಕು ಅಧಿಕಾರಿಗಳ ತಂಡವು ಮೇ 7ರಂದು ಮಧ್ಯಾಹ್ನ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸಿ ಮನವೊಲಿಸಿತು.
ಗ್ರಾಮಸ್ಥರ ಎಲ್ಲ ಬೇಡಿಕೆಗಳನ್ನು ಈಡೇರಿಸಿದ್ದರಿಂದ ಗ್ರಾಮಸ್ಥರು ಮತದಾನ ಮಾಡಲು ಒಪ್ಪಿಗೆ ನೀಡಿದರು. ವಿಧಾನಸಭಾ ಚುನಾವಣೆಯಲ್ಲಿ ಗ್ರಾಮದಲ್ಲಿ ಶೇ.100 ರಷ್ಟು ಮತ ಚಲಾಯಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದರು.

ಈ ವೇಳೆ ತಹಸೀಲ್ದಾರರಾದ ಶ್ರೀ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್, ಸಣ್ಣ ನೀರಾವರಿ ಇಲಾಖೆ ಸಹಾಯಕ ನಿರ್ದೇಶಕರಾದ ಕೃಷ್ಣಮೂರ್ತಿ, ಎಂಜಿನಿಯರ್ ಶೇಲ್ವಕುಮಾರ್, ಕನಕಗಿರಿ ಪೊಲೀಸ್ ಠಾಣೆ ಸಿಪಿಐ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಮುಖಂಡರು ಇದ್ದರು.