ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಬೆಳಿಗ್ಗೆ 9 ಗಂಟೆವರೆಗೆ ಶೇ.8.26ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ 2023ಕ್ಕೆ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಬೆಳಿಗ್ಗೆ 9 ಗಂಟೆವರೆಗೆ ಶೇ.8.26ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಮಾಹಿತಿ ನೀಡಿದೆ.
ಬೆಂಗಳೂರು ಸೆಂಟ್ರಲ್ ಶೇಕಡಾ 8ರಷ್ಟು, ಬೆಂಗಳೂರು ಉತ್ತರ ಶೇಕಡಾ 8ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 7ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 9ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡಾ 9ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 9ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 6ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 10ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 9ರಷ್ಟು ಮತದಾನವಾಗಿದ್ದರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 6ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 12ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 9ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 8ರಷ್ಟು ಮತದನಾನವಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲಿ ಶೇಕಡಾ 11ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 6ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 7ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 9ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 8ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 13ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 10ರಷ್ಟು, ವಿಜನಗರ ಜಿಲ್ಲೆಯಲ್ಲಿ ಶೇಕಡಾ 7ರಷ್ಟು ಮತದನಾನವಾಗಿದ್ದರೆ, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 7ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.