ವಿಜಯಪುರ ಜಿಲ್ಲೆಯ ಮಸಬಿನಾಳ ಗ್ರಾಮದಲ್ಲಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ.

ವಿಜಯಪುರ: ರೊಚ್ಚಿಗೆದ್ದ ಗ್ರಾಮಸ್ಥರುಮತಯಂತ್ರ ಮತ್ತು ವಿವಿಪ್ಯಾಟ್ ಮಶಿನ್‌ಗಳನ್ನು ಪುಡಿಗಟ್ಟಿರುವ ಘಟನೆ ಜಿಲ್ಲೆಯ ಬಾಗೇವಾಡಿ ತಾಲ್ಲೂಕಿನ ಮಸಬಿನಾಳ ಗ್ರಾಮದಲ್ಲಿ ಇಂದು ನಡೆದಿದೆ.

ಇವಿಎಂ ಯಂತ್ರದಲ್ಲಿ ದೋಷ ಕಂಡುಬಂದಿದ್ದು, ಅಧಿಕಾರಿಗಳು ಮತದಾನ ಕಾರ್ಯ ಸ್ಥಗಿತಗೊಳಿಸಿ ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ವಾಪಸ್ ಕೊಂಡೊಯ್ಯುತ್ತಿದ್ದರು. ಮೀಸಲು ಇಡಲಾಗಿದ್ದ ಮಶಿನ್‌ಗಳನ್ನೂ ತೆಗೆದುಕೊಂಡು ಹೋಗುವುದನ್ನು ಗಮನಿಸಿದ ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಇದಕ್ಕೆ ಸಿಬ್ಬಂದಿ ಸರಿಯಾಗಿ ಉತ್ತರಿಸಲಿಲ್ಲ ಎಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡು ಮತಯಂತ್ರಗಳನ್ನು ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಗ್ರಾಮಸ್ಥರು ಅಧಿಕಾರಿಗಳ ಕಾರನ್ನೂ ಜಖಂಗೊಳಿಸಿದ್ದಾರೆ. ಸಿಬ್ಬಂದಿಗೆ ಥಳಿಸಿದ್ದಾರೆ ಎಂಬ ಆರೋಪವಿದೆ. ಸುದ್ದಿ ತಿಳಿದ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿದರು. ಮಸಬಿನಾಳ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

error: Content is protected !!