
ಚಂಢೀಗಡ: ಕರ್ನಾಟಕದಲ್ಲಿ ಬಜರಂಗದಳವನ್ನು ನಿಷೇಧಿಸುವ ಪಕ್ಷದ ಚುನಾವಣಾ ಭರವಸೆಯ ಕುರಿತು ಪಂಜಾಬ್ ನ್ಯಾಯಾಲಯದಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮನ್ಸ್ ನೀಡಲಾಗಿದೆ ಎಂದು ವರದಿಯಾಗಿದೆ.
ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಬಜರಂಗದಳದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಖರ್ಗೆ ವಿರುದ್ಧ ಹಿಂದೂ ಸುರಕ್ಷಾ ಪರಿಷತ್ ಬಜರಂಗದಳ ಹಿಂದ್ ಸಂಸ್ಥಾಪಕ ಸಂಗ್ರೂರ್ ಮೂಲದ ಹಿತೇಶ್ ಭಾರದ್ವಾಜ್ ಅವರು ಸ್ಥಳೀಯ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಕಾಂಗ್ರೆಸ್ ಬಜರಂಗದಳವನ್ನು ದೇಶವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಬಜರಂಗದಳವನ್ನು ನಿಷೇಧಿಸುವುದಾಗಿ ಭರವಸೆ ನೀಡಿದೆ ಎಂದು ಹಿತೇಶ್ ಆರೋಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10 ರಂದು ಹಾಜರಾಗುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಗ್ರೂರ್ ಜಿಲ್ಲಾ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.