ವದೆಹಲಿ: ಈವರೆಗೆ ಮುಖ್ಯಮಂತ್ರಿ ಆಯ್ಕೆ ನಿರ್ಧಾರ ಅಂತಿಮಗೊಂಡಿಲ್ಲ. ಸುಳ್ಳುಸುದ್ದಿಗಳ ಬಗ್ಗೆ ಕಿವಿಗೊಡಬೇಡಿ. 48-72 ಗಂಟೆಯಲ್ಲಿ ನೂತನ ಸಚಿವ ಸಂಪುಟ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬರಲಿದೆ. ಯಾವುದೇ ಸುಳ್ಳು ಸುದ್ದಿಗಳಿಗೆ ಕನ್ನಡಿಗರು ಕಿವಿಗೊಡಬಾರದು ಎಂಬುದಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ಇಂದು ಖರ್ಗೆ ನಿವಾಸದ ಬಳಿ ಮಾತನಾಡಿದಂತ ಅವರು, ರಾಹುಲ್ ಗಾಂಧಿ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಮಾತನಾಡಿ ಸಿಎಂ ಆಯ್ಕೆ ಬಗ್ಗೆ ಚರ್ಚಿಸಲಾಯಿತು ಎಂದರು.

ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದರು. ಸಿಎಂ ಆಯ್ಕೆ ಬಗ್ಗೆ ಈವರೆಗೆ ಅಂತಿಮ ನಿರ್ಧಾರವಾಗಿಲ್ಲ. ಅವಿರೋಧವಾಗಿ ಸಿಎಲ್ ಪಿ ನಾಯಕನ ಆಯ್ಕೆಗಾಗಿ ಪ್ರಯತ್ನಿಸಲಾಗುತ್ತಿದೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. 48-72 ಗಂಟೆಯೊಳಗೆ ನೂತನ ಸಂಪುಟ ರಚಿಸಲಾಗುತ್ತದೆ ಎಂದರು.

ಶಾಸಕರು ಕರ್ನಾಟಕ ಮುಂದಿನ ಸಿಎಂ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸರ್ವಾನುಮತದ ಅಧಿಕಾರವನ್ನು ನೀಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಹೆಸರನ್ನು ಅಂತಿಮಗೊಳಿಸಲಿದ್ದಾರೆ. ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ಮುಂದಿನ 48-72 ಗಂಟೆಯಲ್ಲಿ ಅಸ್ತಿತ್ವಕ್ಕೆ ಬರಲಿದೆ. ಅಲ್ಲಿಯವರೆಗೂ ಕನ್ನಡಿಗರು, ಮಾಧ್ಯಮದವರು ಕಾಯಬೇಕು. ಯಾವುದೇ ಸುಳ್ಳುಸುದ್ದಿಗಳಿಗೆ ಕಿವಿಗೊಡದಂತೆ ಅವರು ಮನವಿ ಮಾಡಿದರು.

error: Content is protected !!