ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವಂತ 5 ಭರವಸೆ ಗ್ಯಾರಂಟಿಗಳನ್ನು ಇಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲೇ ಜಾರಿಗೊಳಿಸುವುದಾಗಿ ನೂತನ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು.

ಇಂದು ಕಂಠೀರವ ಕ್ರೀಢಾಂಗಣದಲ್ಲಿ ಸಿಎಂ ಪ್ರಮಾಣವಚನ ಕಾರ್ಯಕ್ರಮದ ಬಳಿಕ ವಂದನಾರ್ಪಣೆ ಮಾಡುತ್ತಾ ಮಾತನಾಡಿ, ಇವತ್ತು ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವಂತ ಜಯ, ಈ ನಾಡಿನ 7 ಕೋಟಿ ಕನ್ನಡಿಗರಿಗೆ ಸಿಕ್ಕಿರುವಂತ ಜಯ.

ಅವರೆಲ್ಲರ ಆಶೀರ್ವಾದದಿಂದ ಇವತ್ತು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬರಲು ಈ ರಾಜ್ಯದ ಜನರ ಆಶೀರ್ವಾದ ಕಾರಣ ಎಂದು ಹೇಳಲು ಬಯಸುತ್ತೇನೆ ಎಂದರು.

ಈ ರಾಜ್ಯದಲ್ಲಿ ಪ್ರಚಾರ ಪ್ರಾರಂಭವಾಗಿದ್ದು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಮೂಲಕವಾಗಿದೆ. ಅದರ ಜೊತೆಗೆ ಖರ್ಗೆ, ಪ್ರಿಯಾಂಕಾ ಗಾಂಧಿ, ಇನ್ನೂ ಅನೇಕ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದಾರೆ. ನಾನು ಅವರೆಲ್ಲರಿಗೂ ಹೃದಯ ತುಂಬಿದ ಧನ್ಯವಾದಗಳನ್ನು ಅರ್ಪಿಸಲು ಬಯಸುತ್ತೇನೆ. ಜೊತೆಗೆ ಸಾಹಿತಿಗಳು, ಚಿಂತಕರು, ಸಂಘಟನೆಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸಪೋರ್ಟ್ ಮಾಡಿದ್ದಾರೆ ಅವರಿಗೆ ಧನ್ಯವಾದಗಳು ಎಂದರು.

ವಿಶೇಷವಾಗಿ ಈ ರಾಜ್ಯದ ಮಹಿಳೆಯರು, ರೈತರು, ಯುವಕರು ಕೂಡ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಿದಂತ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ಧನ್ಯವಾದಗಳು ಎಂದರು.

ವಿಶೇಷವಾಗಿ ಕನ್ನಡದ ಎಲ್ಲ ಜನರಿಗೆ ನಾನು ಧನ್ಯವಾದಗಳನ್ನು ಹೇಳುತ್ತೇನೆ. ನಾವು ಜನರ ನಿರೀಕ್ಷಿಗೆ ತಕ್ಕಂತೆ ಆಡಳಿತ ನೀಡುತ್ತೇವೆ. ಜನರಿಗೆ ನೀಡಿರುವಂತ ಭರವಸೆಗಳು, ಗ್ಯಾರಂಟಿಗಳನ್ನು ಇವತ್ತೇ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಒಪ್ಪಿಗೆ ಕೊಡವ ಮೂಲಕ, ಐದು ಗ್ಯಾರಂಟಿಗಳನ್ನು ಜಾರಿಗೆ ತರುವಂತ ಕೆಲಸ ಮಾಡುತ್ತೇವೆ ಎಂದರು.

ಇದು ಕನ್ನಡ ನಾಡಿನ ಜನರಿಗೆ ನಮ್ಮ ಹೊಸ ಸರ್ಕಾರ ಕೊಡುವಂತ ಭರವಸೆ, ವಾಗ್ಧಾನವಾಗಿದೆ. ಈ ಭರವಸೆಯನ್ನು ಈಡೇರಿಸಿಯೇ ಈಡೇರಿಸುತ್ತೇವೆ. ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವಂತ ಇತರೆ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳುತ್ತಾ ನನ್ನ ಮಾತು ಮುಗಿಸುತ್ತೇನೆ ಎಂದರು.

error: Content is protected !!