ಬೆಂಗಳೂರು : ಇದೇ ಸೋಮವಾರ ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದು, ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.

ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊ ಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದ್ದು ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಪ್ರ‌ಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸನ್ನಿಹಿತದಲ್ಲಿಯೇ ಪುನರಾರಂಭ ಮಾಡಲಾಗುವುದು ಎಂದೂ ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು.

ಇದೇ ವೇಳೆ ಅವರು ಮುಂದಿನ ಜುಲೈ ತಿಂಗಳಿನಲ್ಲೇ ರಾಜ್ಯ ಬಜೆಟ್ ಮಂಡಿಸುವುದಾಗಿ ನೂತನ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇನ್ನೂ ಎರಡು ವರ್ಷದವರೆಗೆ ತಿಂಗಳಿಗೆ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ, ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳು 1,500 ರೂ. ಭತ್ಯೆ ನೀಡುತ್ತೇವೆ. ಮಧ್ಯೆ ಕೆಲಸ ಸಿಕ್ಕಿದರೆ ಭತ್ಯೆ ನೀಡುವುದಿಲ್ಲ ಎಂದು ತಿಳಿಸಿದರು.

error: Content is protected !!