ಬೆಂಗಳೂರು : ರಾಜ್ಯ ಸರ್ಕಾರಕ್ಕೆ (State Government) ಮುರುಘಾಮಠಕ್ಕೆ (Murugamatha) ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೈಕೋರ್ಟ್ (Karnataka High Court) ಮಹತ್ವದ ತೀರ್ಪು ನೀಡಿದೆ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಹೈಕೋರ್ಟ್ ಹೇಳಿದೆ.

ನ್ಯಾ.ಕೃಷ್ಣ ದೀಕ್ಷೀತ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿದ್ದು, ಮುರುಘಾಮಠಕ್ಕೆ ವೀರಶೈವ ಮುಖಂಡರು, ಸಮಾಜದ ಪ್ರಮುಖರು ಆಡಳಿತ ನಡೆಸಬಹುದು. 4 ವಾರಗಳ ಮಾತ್ರ ಆಡಳಿತಾಧಿಕಾರಿ ಮುಂದುವರೆಯಬಹುದು. 4 ವಾರಗಳ ನಂತರ ಆಡಳಿತಾಧಿಕಾರಿಗೆ ಅಧಿಕಾರ ಇಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ಈ ಸಂಬಂಧ ಡಾ. ಶಿವಮೂರ್ತಿ ಮುರುಘಾಶ್ರೀ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಆಡಳಿತಾಧಿಕಾರಿ ನೇಮಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನ ಏಕಸದಸ್ಯ ನ್ಯಾಯಪೀಠ, ಸರ್ಕಾರಕ್ಕೆ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಅಧಿಕಾರ ಇಲ್ಲ ಎಂದು ಹೇಳಿದೆ.

error: Content is protected !!