ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಗ್ರಾ.ಪಂ ಚುನಾವಣೆಗೆ ಚುನಾವಣಾ ಆಯೋಗ ಚುರುಕಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ರಚನೆಗೆ ಆದೇಶ ಹೊರಡಿಸಿದೆ.

ಸಂವಿಧಾನದ ಅನುಚ್ಛೇದ 243ಕೆ ಅಡಿಯಲ್ಲಿ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು ನಡೆಸಲು ಸಮಸ್ತ ಅಧಿಕಾರಗಳನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಕೊಡಲಾಗಿದೆ.

ಅದರಂತೆ, ಚುನಾವಣೆಗಳ ವಿಷಯದಲ್ಲಿ ಅಧಿನಿಯಮ/ ನಿಯಮಗಳ ಮೂಲಕ ಸ್ಪಷ್ಟಪಡಿಸದ ಚುನಾವಣಾ ಸಂಬಂಧದ ಕರ್ತವ್ಯಗಳ ಬಗ್ಗೆ ಆದೇಶ/ ನಿರ್ದೇಶನಗಳನ್ನು ನೀಡಲು ಆಯೋಗವು ಮೇಲೆ ಹೇಳಿದ ಅನುಚ್ಛೇದದ ಅಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಕಾರ್ಯ ನಿರ್ವಹಿಸಬಹುದಾಗಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 44ರ ಉಪ ಪ್ರಕರಣ (2)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಜ್ಯ ಚುನಾವಣಾ ಆಯೋಗವು ರಾಜ್ಯದ 5948 ಗ್ರಾಮ ಪಂಚಾಯಿತಿಗಳಿಗೆ ಅನುಸೂಚಿತ ಜಾತಿ, ಅನುಸೂಚಿತ ಪಂಗಡ, ಹಿಂದುಳಿದ ವರ್ಗ (ಅ), ಹಿಂದುಳಿದ ವರ್ಗ (ಬ) ಮತ್ತು ಸಾಮಾನ್ಯ ವರ್ಗಗಳಿಗೆ ಹಾಗೂ ಈ ಪ್ರವರ್ಗಗಳಲ್ಲಿ ಮಹಿಳೆಯರಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಗಳನ್ನು ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದಲ್ಲಿ ನಮೂದಿಸಿದಂತೆ ರಾಜ್ಯದಲ್ಲಿರುವ ಎಲ್ಲಾ ತಾಲ್ಲೂಕುಗಳಿಗೆ ನಿರ್ದಿಷ್ಟಪಡಿಸಲಾಗಿದೆ. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಹುದ್ದೆಗಳನ್ನು ಆಯಾಯ ತಾಲ್ಲೂಕಿನ ಜನಸಂಖ್ಯೆಯ ಆಧಾರದ ಮೇಲೆ ನಿಗದಿಪಡಿಸಿದೆ.

error: Content is protected !!