ಬೆಂಗಳೂರು : ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ.

ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!?

ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?! ಎಂದು ಬಿಜೆಪಿಗೆ ಕಾಂಗ್ರೆಸ್ ಟ್ವೀಟ್ ಮೂಲಕ ಟಾಂಗ್ ನೀಡಿದೆ.

ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
error: Content is protected !!