ಬೆಂಗಳೂರು : ಜೂನ್ 1 ರಿಂದ ಯಾಕೆ ನಾಳೆಯಿಂದಲೇ ನಮ್ಮ ಮನೆಯ ಹತ್ತಿರ ಬಂದು ಮಲಗಲು ಹೇಳಿ ಎಂದು ಸಂಸದ ಪ್ರತಾಪ್ ಸಿಂಹಗೆ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ. ಜೂನ್ 1 ರಿಂದ ಯಾಕೆ ನಾಳೆಯಿಂದಲೇ ನಮ್ಮ ಮನೆಯ ಹತ್ತಿರ ಬಂದು ಮಲಗಲು ಹೇಳಿ ಎಂದು ಲೇವಡಿ ಮಾಡಿದ್ದಾರೆ. ಸಚಿವ ಸಂಪುಟ ಸ್ಥಾನದ ಕುರಿತು ಪ್ರತಿಕ್ರಿಯೆ ನೀಡಿ ಡಿಕೆಶಿ ನಾನು ಮತ್ತೆ ಇಂದು ದೆಹಲಿಗೆ ಹೋಗುತ್ತೇನೆ, ಎಲ್ಲವೂ ಫೈನಲ್ ಆದ ಮೇಲೆ ನಾನೇ ತಿಳಿಸುವೆ ಎಂದಿದ್ದಾರೆ.

ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು. ಎಚ್ಚೆತ್ತುಕೊಂಡಿದ್ದರೆ ಬಿಜೆಪಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ಇದ್ದೇನೆ. ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಲ್ಲ. ಜೂನ ್1 ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ. ನಮ್ಮ ಕಾರ್ಯಕರ್ತರು ನಿಜವಾಗಿಯೂ ನೊಂದಿದ್ದಾರೆ. ದೇಶ, ಧರ್ಮ ಅಂತಾ ನಮ್ಮ ಕಾರ್ಯಕರ್ತರು ದುಡಿಯುತ್ತಾರೆ ಎಂದಿದ್ದಾರೆ.

error: Content is protected !!