ಗಂಗಾವತಿ :- ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನ ಧರ್ಮ ನಿಷ್ಠೆ, ಧಾರ್ಮಿಕ ಭಾವನೆಯನ್ನು ಎಲ್ಲರೂ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಹೇಳಿದರು.
ಕೊಪ್ಪಳ ಜಿಲ್ಲೆಯ ಚಳ್ಳೂರು ಗ್ರಾಮದಲ್ಲಿ ಹಮ್ಮಿಕೊಂಡ ಶ್ರೀ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಶಿವಶರಣರ ವಚನಗಳ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ನಾವೆಲ್ಲ ಸಿದ್ಧರಾಗಬೇಕು. ಪತಿ ಭಕ್ತಿಗೆ ಹೇಮರೆಡ್ಡಿ ಮಲ್ಲಮ್ಮ ಉತ್ತಮ ಉದಾಹರಣೆಯಾಗಿದ್ದಾಳೆ. ಜೀವನದಲ್ಲಿ ಹಲವು ಕಷ್ಟ ನಷ್ಟ ಅನುಭವಿಸಿದ ಮಲ್ಲಮ್ಮ ಇಂದಿನ ಪೀಳಿಗೆಗೆ ಆದರ್ಶವಾಗಿದ್ದಾಳೆ ಎಂದು ಹೇಳಿದರು.
ಇದಕ್ಕೂ ಮುನ್ನ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ತೆರದ ವಾಹನದಲ್ಲಿ ಅದ್ದೂರಿಯಾಗಿ ಮೆರವಣಿಗೆ ಮೂಲಕ ಮಹಿಳೆಯರು ಕುಂಬ ಹೊತ್ತು ವೇದಿಕೆಯತ್ತ ಕರೆ ತಂದರು.
ಈ ಸಂದರ್ಭದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೆರೂರು, ಯುವ ಘಟಕದ ರಾಜ್ಯ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಮುಖಂಡ ತಿಮ್ಮಾರೆಡ್ಡಿ, ಸಂಜಯ ಬೇಟಗೇರಿ, ಸಣ್ಣ ಅಮರೇಶಪ್ಪ, ದೊಡ್ಡಬಸನಗೌಡ,ಚನ್ನಕೇಶವ,ಪಂಪಣ್ಣ, ಶರಣಗೌಡ ಸಾಹುಕಾರ್, ಹನುಮನಗೌಡ, ರುದ್ರಗೌಡ ಸೇರಿದಂತೆ ಅನೇಕರು ಉಪಸ್ಥಿರಿದ್ದರು.
