ರೈಲು ದುರಂತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡುವ ಮೂಲಕ ಸ್ಥಳೀಯರು ಮಾನವೀಯತೆ ಮೆರೆಯುತ್ತಿದ್ದಾರೆ.
ಬಾಲಸೋರ್ (ಒಡಿಶಾ): ಬಾಲಸೋರ್‌ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 238 ಜನರು ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಬಾಲಸೋರ್‌ನ ಸ್ಥಳೀಯರು ಗಾಯಾಳುಗಳಿಗೆ ಸಹಾಯ ಮಾಡಲು ಮುಂದೆ ಬರುತ್ತಿದ್ದಾರೆ
ಕಳೆದ ರಾತ್ರಿಯಿಂದ ನಾವು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಎಸ್ ಕೆ ದತ್ತಾ ಮಾಹಿತಿ ಹಂಚಿಕೊಂಡಿದ್ದಾರೆ. ಕೋಲ್ಕತ್ತಾದಿಂದ ಹೆಚ್ಚಿನ ಸೇನಾ ಸಿಬ್ಬಂದಿ ಬರುತ್ತಿದ್ದಾರೆ.
ಬೆಳಗ್ಗಿನ ಮಾಹಿತಿ ಪ್ರಕಾರ, ಒಟ್ಟು 200 ಆಂಬ್ಯುಲೆನ್ಸ್‌ಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವುಗಳಲ್ಲಿ 20 ಕ್ಕೂ ಹೆಚ್ಚು ಸರ್ಕಾರಿ ಆಂಬ್ಯುಲೆನ್ಸ್‌ಗಳಿವೆ. ಇವರಲ್ಲದೇ 45 ಸಂಚಾರಿ ಆರೋಗ್ಯ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಎಸ್‌ಸಿಬಿಯ 25 ವೈದ್ಯರ ತಂಡದೊಂದಿಗೆ 50 ಹೆಚ್ಚುವರಿ ವೈದ್ಯರನ್ನೂ ನಿಯೋಜಿಸಲಾಗಿದೆ. ಅಧಿಕಾರಿಗಳ ಪ್ರಕಾರ, ಮೃತದೇಹದ ವಿಲೇವಾರಿ ಮೇಲ್ವಿಚಾರಣೆಗೆ PRM MCH, Baripada ಮತ್ತು SCB MCH ನಿಂದ ವಿಧಿವಿಜ್ಞಾನ ಔಷಧ ತಜ್ಞರು (FMTs) ನಿಯೋಜಿಸಲಾಗಿದೆ.
ಪರಿಹಾರ ಘೋಷಣೆ: ಪ್ರಧಾನಿ ನರೇಂದ್ರ ಮೋದಿ ಅವರೂ ಸೇರಿದಂತೆ ಅನೇಕ ರಾಜಕಾರಣಿಗಳು, ಗಣ್ಯರು ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಧನ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಪರಿಹಾರವನ್ನು ಪಿಎಂ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.