5 ಗ್ಯಾರಂಟಿಗಳ ಜಾರಿ ಬೆನ್ನಲ್ಲೇ ಮತ್ತೊಂದು ಗ್ಯಾರಂಟಿ ಈಡೇರಿಸಲು ಆಗ್ರಹ ಕೇಳಿಬಂದಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಆ ಹಿನ್ನೆಲೆಯಲ್ಲಿ ಕೂಡಲೇ ಆಶ್ವಾಸನೆಯನ್ನು ಜಾರಿಮಾಡಬೇಕೆಂದು ಅಂಗನವಾಡಿ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.
ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಗೌರವಧನವನ್ನು ಹೆಚ್ಚಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಹೀಗಾಗಿ ಇಂದು ಈ ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯ ಕೇಳಿಬರುತ್ತಿದೆ. ಅಲ್ಲದೇ ಆಶಾ ಕಾರ್ಯಕರ್ತೆಯರು ಸಿಎಂ ಭೇಟಿ ಮಾಡಲು ಮುಂದಾಗಿದ್ದಾರೆ.