ಬೆಂಗಳೂರು : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡುವ `ಶಕ್ತಿ ಯೋಜನೆ’ಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಹಿಳೆಯರ ಉಚಿತ ಬಸ್ ಸೇವೆಗೆ ಅವಕಾಶ ನೀಡುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು, ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.ಎಂದು ಅಧಿಕೃತವಾಗಿ ಚಾಲನೆ ಮಾಡಿದ್ದಾರೆ

ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಾರಿಗೆ ಸಚಿವ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಿದ್ದಾರೆ.

ಮೊದಲಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ಮಹಿಳಾ ಅಧಿಕಾರಿ ವಂದಿತಾ ಶರ್ಮ  ಅವರಿಗೆ ಮೊದಲು ಟಿಕೆಟ್ ನೀಡಿದರು.

ಶಕ್ತಿ ಯೋಜನೆ ಅಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯವನ್ನು ಇಂದು ಮಧ್ಯಾಹ್ನ 01 ಗಂಟೆಯಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗುತ್ತಿದೆ. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಮಹಿಳೆಯರು ಕರ್ನಾಟಕ ರಾಜ್ಯದ ನಿವಾಸಿಗಳೆಂಬ ಪುರಾವೆಗಾಗಿ ತಮ್ಮ ಮೂಲ ದಾಖಲಾತಿಗಳನ್ನು ಆಧಾರ ಕಾರ್ಡ್  ಐ. ಡಿ. ಕಾರ್ಡ್ ಇನ್ನಿತರ ದಾಖಲಾತಿ ಗಳನ್ನು ತೋರಿಸಿ ಉಚಿತ ವಾಗಿ ಮಹಿಳೆಯರು ಪ್ರಯಾಣ ಮಾಡಬಹುದಾಗಗಿದೆ

ಇಂದು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಮಂತ್ರಿಗಳಿಂದ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. 4 ನಿಗಮ ದ ಬಸ್ ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದಾಗಿದೆ.

error: Content is protected !!