ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂನ್ 27 ರಂದು ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿಯನ್ನು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಅರ್ಥಪೂರ್ಣವಾಗಿ
ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಕೆಂಪೇಗೌಡ ಜಯಂತಿ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಿಂದ ಕಲಾತಂಡದೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಕೆಂಪೇಗೌಡರ ಅಲಂಕೃತ ಭಾವಚಿತ್ರದ ಮೆರವಣಿಗೆ ಹೊರಟಿ ಕಲಾಮಂದಿರ ತಲುಪಲಿದೆ ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳು ತಮಗೆ ವಹಿಸಿರುವ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಅಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಹೇಳಿದರು.
ಅಂದು ಸಂಜೆ 5 ಗಂಟೆಗೆ ಕೆಂಪೇಗೌಡರ ಕುರಿತು ಜಯರಾಂ ರಾಯಪುರ ವಿರಚಿತ ಸಿರಿಗೆ ಸೆರೆ ನಾಟಕ ಪ್ರದರ್ಶನವನ್ನು ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದು, ಸಾರ್ವಜನಿಕರು ಭಾಗಿಯಾಗಬೇಕು ಎಂದು ಮನವಿ ಮಾಡಿದರು.
ಸಂಘ ಸಂಸ್ಥೆಗಳ ಮುಖಂಡರು ಜಯಂತಿ ಆಚರಣೆ ಬಗ್ಗೆ ಸಭೆಗೆ ಸಲಹೆಗಳನ್ನು ನೀಡಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್ ಉದಯ್ ಕುಮಾರ್, ರೆಡ್ ಸಂಸ್ಥೆಯ ಉಪಾಧ್ಯಾಕ್ಷೆ ಮೀರಾ ಶಿವಲಿಂಗಯ್ಯ, ಒಕ್ಕಲಿಗ ಸಂಘದ ಜಿಲ್ಲಾಧ್ಯಾಕ್ಷ ಕೃಷ್ಣ, ನೇಗಿಲಯೋಗಿ ಟ್ರಸ್ಟ್ ಅಧ್ಯಕ್ಷ ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.