ಕೊಪ್ಪಳ ಡಿಸೆಂಬರ್ 22 (ಕರ್ನಾಟಕ ವಾರ್ತೆ): ಜಿಲ್ಲೆಯ ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕತೆನ್ನು ತಡೆಯುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು 2023ರ ಜನವರಿ 22 ರವರೆಗೆ ಮುಂದುವರಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು ಅವರು ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ದನ, ಎಮ್ಮೆಗಳಲ್ಲಿ ಜಾನುವಾರು ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡು ವ್ಯಾಪಕವಾಗಿ ಹರಡುತ್ತಿದ್ದು ಈ ಕುರಿತು ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಜರುಗಿಸುವುದು ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು ಮುಂದುವರೆಸುವಂತೆ ಪಶುಪಾಲನಾ ಮತ್ತು ಪಶು ಸೇವಾ ಇಲಾಖೆಯ ಉಪ ನಿರ್ದೇಶಕರು ಕೋರಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧವನ್ನು 2023ರ ಜನವರಿ 22ರ ವರೆಗೆ ವಿಸ್ತರಿಸಿ ಸಿ.ಆರ್.ಪಿ.ಸಿ ಕಾಯ್ದೆ 1973ರ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿ ಮಾಡಲಾಗಿದೆ.
ಪ್ರತಿಬಂಧಕಾಜ್ಞೆಯನ್ವಯು ದನ, ಎಮ್ಮೆಗಳ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾತ್ರ ಅನ್ವಯವಾಗುತ್ತಿದೆ. ಇದನ್ನು ಹೊರತುಪಡಿ ಬೇರೆ ಯಾವುದೇ ಉದ್ದೇಶಕ್ಕೆ ಅನ್ವಯವಾಗುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 188ರ ಪ್ರಕಾರ ಕ್ರಮ ಕೈಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ಸೂಚನೆ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.