ಕೊಪ್ಪಳ ಡಿಸೆಂಬರ್ 22 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಪಡಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹೊರಡಿಸಲಾದ ಅಧಿಸೂಚನೆಯಂತೆ ಕೊಪ್ಪಳ ಜಿಲ್ಲೆಯ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇದ್ದ 12 ಅಂಗನವಾಡಿ ಕಾರ್ಯಕರ್ತೆ ಹಾಗೂ 60 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಪ್ರಸ್ತುತ ಈ ಅಧಿಸೂಚನೆಯನ್ನು ಕಾರಣಾಂತರಗಳಿಂದ ರದ್ದು ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.