ಕೊಪ್ಪಳ: ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯಲಬುರ್ಗಾ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ವಕೀಲರ ಸಂಘ, ಹಿರೇಅರಳಿಹಳ್ಳಿ ಸರ್ಕಾರಿ ಪ್ರೌಢ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಜೂನ್ 16ರಂದು ಹಿರೇಅರಳಿಹಳ್ಳಿಯಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವೇಂದ್ರ ಪಂಡಿತ್ ಅವರು ಕಾರ್ಯಕ್ರಮ ಉದ್ಫಾಟಿಸಿದರು. ಬಳಿಕ ಮಾತನಾಡಿ, ಜನಸಾಮಾನ್ಯರಾದ ನಾವುಗಳು ಪ್ರತಿಯೊಬ್ಬರೂ ಕಾನೂನು ಬಗ್ಗೆ ತಿಳುವಳಿಕೆ ಹೊಂದಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿನ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಮಟ್ಟದ ಕಾನೂನು ಸೇವಾ ಸಮಿತಿಗಳ ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಕಾನೂನು ಅರಿವು ನೆರವು ಪಡೆದುಕೊಳ್ಳಬೇಕು ಎಂದು ಹೇಳಿದರು.
ಯಲಬುರ್ಗಾ ಪ್ಯಾನಲ್ ವಕೀಲರಾದ ಜೆ.ಹೆಚ್.ತೊಂಡಿಹಾಳ ಅವರು ಜನಸಾಮಾನ್ಯರಿಗಾಗಿ ಕಾನೂನು ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ದರಾಮಪ್ಪ ಪತ್ತಾರ ಅವರು ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ಸಂವಿಧಾನ ಪೀಠಿಕೆಯ ಪ್ರಮಾಣ ವಚನ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಯಲಬುರ್ಗಾ ವಕೀಲರ ಸಂಘದ ಅಧ್ಯಕ್ಷರಾದ ಪ್ರಕಾಶ ಎಸ್. ಬೇಲೇರಿ, ಹಿರಿಯ ವಕೀಲರಾದ ಎಸ್.ಎ. ವಾದಿ ಹಿರೇಅರಳಿಹಳ್ಳಿ, ಪ್ಯಾನಲ್ ವಕೀಲರಾದ ಮಲ್ಲನಗೌಡ ಎಸ್ ಪಾಟೀಲ್, ಶಶಿಧರ ಶ್ಯಾಗೋಟಿ ಹಾಗೂ ಹೆಚ್.ಪಿ.ಕಮ್ಮಾರ ಸೇರಿದಂತೆ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
