ಕೊಪ್ಪಳ ಜೂನ್ 17: ಕಾರಟಗಿ ತಾಲೂಕಿನ 13 ಗ್ರಾಮ ಪಂಚಾಯತಗಳ ಎರಡನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಮೀಸಲಾತಿ ನಿಗದಿ ಸಂಬಂಧ ಜೂನ್ 17ರಂದು ಕಾರಟಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಮುದಾಯ ಭವನದಲ್ಲಿ ಆಯಾ ಗ್ರಾ.ಪಂ.ಗಳ ಸದಸ್ಯರ ಸಭೆ ನಡೆಯಿತು.

ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರ ಸಮ್ಮುಖದಲ್ಲಿ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳ ಮೀಸಲಾತಿ ನಿಗದಿ ಪ್ರಕ್ರಿಯೆ ನಡೆಯಿತು.

ಗ್ರಾ.ಪಂ.ವಾರು ವಿವಿರ: ಉಳೆನೂರು ಗ್ರಾಮ ಪಂಚಾಯತ್‌ಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಬೆನ್ನೂರು ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಬೂದಗುಂಪಾ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಯರಡೋಣಾ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಗುಂಡೂರು ಅಧ್ಯಕ್ಷ ಸ್ಥಾನ ಎಸ್ಸಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಮರ್ಲಾನಹಳ್ಳಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ ಮಹಿಳೆ, ಹುಳ್ಕಿಹಾಳ ಅಧ್ಯಕ್ಷ ಸ್ಥಾನ ಎಸ್ಟಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಚಳ್ಳುರು ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಟಿ, ಮೈಲಾಪುರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಬೇವಿನಾಳ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ಬರಗೂರು ಅಧ್ಯಕ್ಷ ಸ್ಥಾನ ಕೆಟಗೇರಿ-ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ಸಿ, ಮುಸ್ಟೂರು ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಸಿದ್ದಾಪುರ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾತಿ ನಿಗದಿಪಡಿಸಲಾಯಿತು.

ಈ ಸಂದರ್ಭದಲ್ಲಿ ಕಾರಟಗಿ ತಹಶೀಲ್ದಾರರಾದ ಎಂ.ಬಸವರಾಜ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ನರಸಪ್ಪ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.

error: Content is protected !!