ರಾಜ್ಯ ಸರ್ಕಾರ ಕೇಂದ್ರ ಮತ್ತು ಇತರ ರಾಜ್ಯಗಳಿಂದ ಅಕ್ಕಿ ಖರೀದಿಸುವ ಬದಲಿಗೆ ಕಲ್ಯಾಣ ಕರ್ನಾಟಕದಲ್ಲಿ ಅತಿ ಹೆಚ್ಚು ಬೆಳೆಯುವ ಸೋನಾ ಮಸೂರಿ ಭತ್ತ ಖರೀದಿಸಿ ಅಕ್ಕಿ ಮಾಡಿ ಜನರಿಗೆ ವಿತರಿಸಲು ಸಿಎಂ ಸಿದ್ದರಾಮಯ್ಯನವರು ಚಿಂತನೆ ನಡೆಸಬೇಕಿತ್ತು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಮಲ್ಲೇಶ್ ಒತ್ತಾಯಿಸಿದ್ದಾರೆ.
ನಗರದ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ನೀಡಿ ಸರ್ಕಾರ 5 ಕೆಜಿ ಅಕ್ಕಿ ನೀಡಬೇಕು ಎಂದು ಕೇಂದ್ರಕ್ಕೆ ಒತ್ತಾಯಿಸು ತಿದ್ದಾರೆ ಆದರೆ 5 ಕೆಜಿ ಅಕ್ಕಿ ನೀಡುವುದಕ್ಕೆ ಕೇಂದ್ರ ನಿರಾಕರಿಸುತ್ತಿದೆ. ಕೇಂದ್ರ ಹಾಗೂ ಬೇರೆ ರಾಜ್ಯಗಳಿಗೆ ಬೇಡಿಕೆ ಸಲ್ಲಿಸುವುದು, ಅಪಾದನೆ ಮಾಡುವ ಬದಲಿಗೆ ಕಲಬುರಗಿ, ಯಾದಗಿರಿ, ರಾಯಚೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಬೆಳೆಯುವ ಸೋನಾ ಮಸೂರಿ ಭತ್ತ ಬೆಳೆಯುತ್ತಿದ್ದು ನಮ್ಮ ಸೋನಾಮೊಸುರಿ ಅಕ್ಕಿಯನ್ನೇ ಖರೀದಿ ಮಾಡಿ ನ್ಯಾಯಬೆಲೆ ಅಂಗಡಿ ಮೂಲಕ ಜನರಿಗೆ ತಲುಪಿಸಿ ನಮ್ಮ ರಾಜ್ಯದ ಬೆಳೆಗಾರರಿಗೆ ಉತ್ತೇಜನ ನೀಡಿದಂತೆ ಆಗುತ್ತದೆ ಎಂದರು.
ಈ ನಿಟ್ಟಿನಲ್ಲಿ ಯಾಕೆ ಚಿಂತನೆ ನಡೆಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದರಿಂದ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಅನುಕೂಲವಾಗುತ್ತದೆ ಇದರ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಚಿಂತನೆ ನಡೆಸಬೇಕೆಂದು ಈ ಮೂಲಕ ಒತ್ತಾಯಿಸಿದರು.