ಕೊಪ್ಪಳ ಡಿಸೆಂಬರ್ 23 (ಕರ್ನಾಟಕ ವಾರ್ತೆ): ಫೈಲಿಂಗ್ ಮಾಡಿಕೊಳ್ಳದೇ ಇರುವ ಸಂಘ ಸಂಸ್ಥೆಗಳು ಡಿಸೆಂಬರ್ 31 ರೊಳಗಾಗಿ ಫೈಲಿಂಗ್ ಮಾಡಿಕೊಳ್ಳುವಂತೆ ಕೊಪ್ಪಳ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘ ಸಂಸ್ಥೆಗಳ ನೋಂದಣಾಧಿಕಾರಿಗಳು ತಿಳಿಸಿದ್ದಾರೆ.


ಸಹಕಾರ ಸಂಘಗಳ ನಿಬಂಧಕರು, ಕರ್ನಾಟಕ ರಾಜ್ಯ, ಬೆಂಗಳೂರು ಇವರು ಸತ್ತೋಲೆ ಪತ್ರದ ಮೂಲಕ ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960 ರಡಿ ನೋಂದಣಿಯಾದ ಸಂಘಗಳು 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೇ ಇರುವ ಸಂಘ ಸಂಸ್ಥೆಗಳನ್ನು ಸಂಘಗಳ ಸದಸ್ಯರ ಹಿತದೃಷ್ಟಿಯಿಂದ ದಂಡದೊಂದಿಗೆ ಷರತ್ತಿಗೊಳಪಟ್ಟು ಡಿಸೆಂಬರ್ 31ರ ಅಂತ್ಯದೊಳಗಾಗಿ ನವೀಕರಿಸಲು ಅನುಮತಿ ನೀಡಿರುತ್ತಾರೆ.


ಆದ್ದರಿಂದ 5 ವರ್ಷಗಳಿಗೂ ಮೇಲ್ಪಟ್ಟು ಫೈಲಿಂಗ್ ಮಾಡಿಕೊಳ್ಳದೇ ಇರುವ ಸಂಘ ಸಂಸ್ಥೆಗಳು ಡಿ. 31ರೊಳಗಾಗಿ ಫೈಲಿಂಗ್ ಮಾಡಿಕೊಳ್ಳಬೇಕು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಮತ್ತೊಮ್ಮೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಹಾಗೂ ಸಂಘ ಸಂಸ್ಥೆಗಳ ನೋಂದಣಾಧಿಕಾರಿಗಳ ಕಛೇರಿ, ಕೊಪ್ಪಳ ದೂರವಾಣಿ ಸಂಖ್ಯೆ: 08539-221109 ಗೆ ಸಂಪರ್ಕಿಸಬಹದು ಎಂದು ಪ್ರಕಟಣೆ ತಿಳಿಸಿದೆ.

error: Content is protected !!