ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹನುಮಂತ ಜಾನೇಕಲ್ ಆಗ್ರಹ
ಮಾನ್ವಿ:- ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಅವರ ಮೇಲೆ ಮಾರಣಾಂತಿಕ ಗುಂಡಿನ ದಾಳಿ ಮಾಡಿದ ಘಟನೆಯನ್ನು ಖಂಡಿಸಿ ಈ ಘಟನೆಯನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹನುಮಂತ ಜಾನೇಕಲ್ ಆಗ್ರಹಿಸಿದರು.
ಪಟ್ಟಣದ ಬಸವ ವೃತ್ತದಲ್ಲಿ ಭೀಮ್ ಆರ್ಮಿ ತಾಲೂಕ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಮಾತನಾಡಿದ ಅವರು ಕಳೆದ ಬುಧವಾರ ಸಹರಾನ್‌ಪುರ ಉತ್ತರ ಪ್ರದೇಶದ ಸಹರಾನ್‌ಪುರದ ದಿಯೋಬಂದ್ ಪ್ರದೇಶದಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಅವರು ದೆಹಲಿಯಿಂದ ಸಹರಾನ್‌ಪುರದ ಚುಟ್ಮಲ್‌ಪುರ ಪಟ್ಟಣದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ್ ಅವರ ಮೇಲೆ ದಿನಾಂಕ 28-06-2023 ರ ಬುಧವಾರ ಮಧ್ಯಾಹ್ನ 1 ಘಂಟೆ ಸುಮಾರಿನಲ್ಲಿ ಅವರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಗುಂಡಿನ ದಾಳಿ ನಡೆಸಿದ ಘಟನೆಯನ್ನು ಭೀಮ್ ಆರ್ಮಿ ತಾಲೂಕ ಘಟಕ ತೀವ್ರವಾಗಿ ಖಂಡಿಸುತ್ತದೆ.

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಬುಧವಾರ ಮಾರಣಾಂತಿಕ ಹಲ್ಲೆ ನಡೆದಿದೆ. ಹರಿಯಾಣದ ನಂಬರ್ ಪ್ಲೇಟ್ ಇರುವ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಮಾರ್ಗಮಧ್ಯೆ ಆಜಾದ್ ಅವರ ಫಾರ್ಚೂನರ್ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಆಜಾದ್ ಗಾಯಗೊಂಡಿದ್ದು, ಸೊಂಟದ ಮೇಲ್ಭಾಗದಲ್ಲಿ ಗುಂಡು ತಗುಲಿದೆ. ಆಸ್ಪತ್ರೆಯಲ್ಲಿ ಗಾಯಗೊಂಡಿದ್ದ ಆಜಾದ್ ಅವರೇ ಘಟನೆಯಲ್ಲಿ ನಡೆದಿದ್ದನ್ನು ಸಿಬಿಐ ತನಿಖೆಗೆ ವಹಿಸಬೇಕು ಮತ್ತು ಸೂಕ್ತ ತನಿಖೆ ಕೈಗೊಂಡು ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸುತ್ತೇವೆ.
ನಂತರ ಹೋರಾಟದ ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಎಲ್.ಡಿ ಚಂದ್ರಕಾಂತ ಅವರ ಮೂಲಕ ರಾಷ್ಟ್ರಪತಿಗಳಿಗೆ ಮತ್ತು ಪ್ರಧಾನ ಮಂತ್ರಿಗಳಿಗೆ ಮನವಿ ಪತ್ರ ನೀಡಿ ಹೋರಾಟ ಕೈ ಬಿಟ್ಟರು.
ಈ ಸಂದರ್ಭದಲ್ಲಿ ಭೀಮ್ ಆರ್ಮಿ ತಾಲೂಕಾಧ್ಯಕ್ಷರಾದ ವೆಂಕಟೇಶ್ ಈರಲಗಡ್ಡಿ, ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾಧ್ಯಕ್ಷ ಲಕ್ಷ್ಮಣ್ ಜಾನೇಕಲ್, ಅಖಿಲ ಕರ್ನಾಟಕ ವಾಲ್ಮೀಕಿ ನ�