ಗಂಗಾವತಿ ನಗರದ ಸಿದ್ದಿಕೇರಿಯಲ್ಲಿ ಇರುವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೇಂದ್ರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಮುಖ್ಯ ಗುರುಗಳು ರಾಘವೇಂದ್ರ
ಹರ್ಷ ವ್ಯಕ್ತಪಡಿಸಿದರು ನಂತರ ಮಾತನಾಡಿದ ಅವರು ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬಹುದು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಬೇಕು ಎಂದು ತಿಳಿಸಿದರು. ಸದೃಢ ಆರೋಗ್ಯವಾಗಿ ಇರಬೇಕಾದರೆ ಕ್ರೀಡಾ ಮುಖ್ಯ ಎಂದರು.


ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ. ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಈ ಮೂಲಕ ಧೈರ್ಯ ಮತ್ತು ಸಾಹಸ ಗುಣಗಳನ್ನು ವೃದ್ಧಿಸುತ್ತದೆ ಎಂದರು


ಕ್ರೀಡಾಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಹುಲಿಗೆಮ್ಮ ಶಾಂತಮ್ಮ ದಿವ್ಯ ಮಾಲ,,ಐಶ್ವರ್ಯ ತೇಜಸ್ವಿನಿ
ಪೂಜಾ S ನಯನಾಬಾಯಿ

error: Content is protected !!