ಹರಿಹರ: ನಗರದ ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್‌ನಲ್ಲಿ ನಿಯಮಾನುಸಾರ ಊಟ ನೀಡುತ್ತಿಲ್ಲ ಎಂಬ ದೂರಿನ ಮೇರೆಗೆ ಶನಿವಾರ ಶಾಸಕ ಬಿ.ಪಿ. ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಸತಿ ನಿಲಯದಲ್ಲಿನ ಅವ್ಯವಸ್ಥೆ ಕಂಡು ಶಾಸಕರು ಫುಲ್ ಗರಂ ಆದರು , ತಕ್ಷಣ ಎಲ್ಲ ಅವ್ಯವಸ್ಥೆ ಸರಿಪಡಿಸುವಂತೆ ವಾರ್ಡನ್‌ಗೆ ಸೂಚಿಸಿದರು.
ಹಾಸ್ಟೆಲ್‌ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲ, ನಿಯಮಾನುಸಾರ ಊಟ ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಶುಕ್ರವಾರ ಶಾಸಕರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಿ.ಪಿ. ಹರೀಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎಚ್. ಗಾಯತ್ರಿ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ನಶ್ರುತ್ ಪರ್ವಿನ್ ಶನಿವಾರ ಬೆಳಗ್ಗೆ ಬಿಸಿಎಂ ಹಾಸ್ಟೆಲ್‌ಗೆ ಭೇಟಿ ನೀಡಿದರು.ಅಲ್ಲಿನ ವಾಸ್ತವ ಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.
ಈ ಸಂದರ್ಭ ನಿಲಯದ ವಾರ್ಡನ್ ಜಿ.ಕೆ. ಕುಮಾರ್‌ಗೆ ಶಾಸಕರು ತರಾಟೆ ತೆಗೆದುಕೊಂಡರು. ತಪ್ಪುಗಳನ್ನು ತಿದ್ದಿಕೊಂಡು ಸರ್ಕಾರದ ನಿಯಮಾನುಸಾರ ಮಕ್ಕಳಿಗೆ ಊಟ ಒದಗಿಸಬೇಕು. ಮತ್ತೆ ಈ ತರಹದ ನೂನ್ಯತೆ ಆಗದಂತೆ ನೋಡಿಕೊಳ್ಳುವಂತೆ ತಾಕೀತು ಮಾಡಿದರು.ಮತ್ತೆ ಈ ತರಹದ ಘಟನೆ ಗಳು ಮರುಕಳಿಸಬಾರದು ಎಂದು ಶಾಸಕರು ತಿಳಿಸಿದ್ದಾರೆ.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎಚ್. ಗಾಯತ್ರಿ ಮಾತನಾಡಿ, ಮುಂದೆ ಈ ರೀತಿ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಿ. ಇಲ್ಲದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ವಾರ್ಡನ್‌ಗೆ ಎಚ್ಚರಿಕೆ ನೀಡಿದರು.