ಕೊಪ್ಪಳ ಜನವರಿ 01 (ಕರ್ನಾಟಕ ವಾರ್ತೆ): 2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ, ಪ್ರವರ್ಗ-1 ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಮತ್ತು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲಾಗಿದ್ದು, ಅವಧಿಯನ್ನು ವಿಸ್ತರಿಸಲಾಗಿದೆ.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ, ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ, ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 2023ರ ಜನವರಿ 20 ರವರೆಗೆ ವಿಸ್ತರಿಸಲಾಗಿದೆ.
2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು 2023ರ ಜನವರಿ 31 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ವಿವರಗಳಿಗಾಗಿ ಸಂಬಂದಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ ಅಥವಾ ವೆಬ್‌ಸೈಟ್ https://bcwd.karnataka.gov.in ಹಾಗೂ ದೂರವಾಣಿ ಸಂಖ್ಯೆ: 8050770005 ಕ್ಕೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.